AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಟಾಚಾರಕ್ಕೆ ಪ್ರವಾಹ ಪರಿಶೀಲನೆ ನಡೆಸಿದ R ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ವರುಣನ ದರ್ಶನ ವಿಕೋಪಕ್ಕೆ ತಿರುಗಿದೆ. ಹೀಗಾಗಿ ಜನ ಸಂಕಷ್ಟದಲ್ಲೇ ಜೀವನ ಸಾಗಿಸುವಂತಾಗಿದೆ. ಬೆಳೆ, ಮನೆ, ರಸ್ತೆ ಎಲ್ಲವೂ ನೀರಿನಲ್ಲಿ ಮುಳುಗಿದೆ. ಆದ ಕಾರಣ ಕಂದಾಯ ಸಚಿವ R. ಅಶೋಕ್ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ್ರು. ಆದರೆ ಕಾಟಾಚಾರದ ಪ್ರವಾಹ ಪರಿಶೀಲನೆ ನಡೆಸಿದ್ದಾರೆ ಎಂದು ಸಂತ್ರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. R.ಅಶೋಕ್ ಕಾಟಾಚಾರದ ಭೇಟಿ: ಸಚಿವ R.ಅಶೋಕ್ ಕಾಟಾಚಾರಕ್ಕೆ ತಮ್ಮ ಪ್ರವಾಸವನ್ನು ಕೈಗೊಂಡಂತಿದೆ. ಏಕೆಂದರೆ ಪ್ರವಾಹದ ಕಾರಣ 50 ಮನೆ ಕುಸಿದಿದ್ರೂ ಒಂದು ಮನೆಗೂ ಸಚಿವರು […]

ಕಾಟಾಚಾರಕ್ಕೆ ಪ್ರವಾಹ ಪರಿಶೀಲನೆ ನಡೆಸಿದ R ಅಶೋಕ್
ಆಯೇಷಾ ಬಾನು
| Edited By: |

Updated on: Oct 19, 2020 | 3:19 PM

Share

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ವರುಣನ ದರ್ಶನ ವಿಕೋಪಕ್ಕೆ ತಿರುಗಿದೆ. ಹೀಗಾಗಿ ಜನ ಸಂಕಷ್ಟದಲ್ಲೇ ಜೀವನ ಸಾಗಿಸುವಂತಾಗಿದೆ. ಬೆಳೆ, ಮನೆ, ರಸ್ತೆ ಎಲ್ಲವೂ ನೀರಿನಲ್ಲಿ ಮುಳುಗಿದೆ. ಆದ ಕಾರಣ ಕಂದಾಯ ಸಚಿವ R. ಅಶೋಕ್ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ್ರು. ಆದರೆ ಕಾಟಾಚಾರದ ಪ್ರವಾಹ ಪರಿಶೀಲನೆ ನಡೆಸಿದ್ದಾರೆ ಎಂದು ಸಂತ್ರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

R.ಅಶೋಕ್ ಕಾಟಾಚಾರದ ಭೇಟಿ: ಸಚಿವ R.ಅಶೋಕ್ ಕಾಟಾಚಾರಕ್ಕೆ ತಮ್ಮ ಪ್ರವಾಸವನ್ನು ಕೈಗೊಂಡಂತಿದೆ. ಏಕೆಂದರೆ ಪ್ರವಾಹದ ಕಾರಣ 50 ಮನೆ ಕುಸಿದಿದ್ರೂ ಒಂದು ಮನೆಗೂ ಸಚಿವರು ಭೇಟಿ ನೀಡಿಲ್ಲ. ರಸ್ತೆ ಪಕ್ಕದ ನಾಲಾ, ಗ್ಯಾರೇಜ್ ಪರಿಶೀಲಿಸಿ ಚಿಕ್ಕೋಡಿಯತ್ತ ತೆರಳಿದ್ದಾರೆ. ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಮೃತಪಟ್ಟಿದ್ದರು. ಕುಸಿದ ಗ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿ ಅಶೋಕ್ ತೆರಳಿದ್ದಾರೆ. ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿಲ್ಲ.

ಹುಕ್ಕೇರಿಯ ಕಂಬಾರಗಲ್ಲಿಯಲ್ಲಿ ಅತಿ ಹೆಚ್ಚು ಹಾನಿ ಆಗಿತ್ತು. ಸಚಿವರು ನಮ್ಮ ಬಳಿ ಬರ್ತಾರೆ. ನಮ್ಮ ಕಷ್ಟಗಳನ್ನು ಆಲಿಸುತ್ತಾರೆ ಎಂದು ಕಾದು ಕುಳಿತಿದ್ದ ಜನರಿಗೆ ನಿರಾಸೆಯಾಗಿದೆ. ನಾನೂ ಕೂಡ ಪ್ರವಾಹದ ಸಮಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ ಎಂದು ಹೇಳಿಕೊಳ್ಳುವುದಕ್ಕಾಗಿ ಬಂದು ಹೋದಂತೆ ಬಂದು ಹೋಗಿದ್ದಾರೆ. R. ಅಶೋಕ್ ಭೇಟಿ ವ್ಯರ್ಥ ಎಂದು ಸಂತ್ರಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಅಶೋಕಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕ ಉಮೇಶ ಕತ್ತಿ ಸಾಥ್ ನೀಡಿದ್ದರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್