ಸೋಂಕಿತರ ಸಂಖ್ಯೆ ಹೆಚ್ತಿದೆ, ಮಸೀದಿಗಳಲ್ಲಿ ನಮಾಜ್ ಸ್ಥಗಿತಗೊಳಿಸಿ ಎಂದರು ಖಾದರ್

|

Updated on: Jun 27, 2020 | 12:56 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತಗೊಳಿಸಲು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ. ಕೊರೊನಾದಿಂದ ಈಗಾಗಲೇ ವೃದ್ಧೆ ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸರು ಸೇರಿ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಱಂಡಮ್ ಟೆಸ್ಟ್ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಉಳ್ಳಾಲದ ಮೀನುಗಾರರು, ಆಟೋ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ಮಾಡಲಾಗುವುದು. ಸೋಂಕು ಹೆಚ್ಚಿದ […]

ಸೋಂಕಿತರ ಸಂಖ್ಯೆ ಹೆಚ್ತಿದೆ, ಮಸೀದಿಗಳಲ್ಲಿ ನಮಾಜ್ ಸ್ಥಗಿತಗೊಳಿಸಿ ಎಂದರು ಖಾದರ್
Follow us on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತಗೊಳಿಸಲು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.

ಕೊರೊನಾದಿಂದ ಈಗಾಗಲೇ ವೃದ್ಧೆ ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸರು ಸೇರಿ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಱಂಡಮ್ ಟೆಸ್ಟ್ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಉಳ್ಳಾಲದ ಮೀನುಗಾರರು, ಆಟೋ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ಮಾಡಲಾಗುವುದು.

ಸೋಂಕು ಹೆಚ್ಚಿದ ಹಿನ್ನೆಲೆ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತಗೊಳಿಸಲಾಗುತ್ತೆ. ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಸಭೆ ನಡೆಸಿ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.

Published On - 12:49 pm, Sat, 27 June 20