
ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು.
ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್ಡೌನ್ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್ಡೌನ್ ತೆರವುಗೊಳಿಸಲಾಗಿದೆ.
ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ ಹಾಗೂ ದಾಸೋಹವನ್ನ ಸ್ಥಗಿತಗೊಳಿಸಲಾಗಿದೆ.
Published On - 8:44 am, Fri, 31 July 20