ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದೇ ವೀರ ಸಾವರ್ಕರ್ ಅಂತೆ! ವಿವಾದ ಎಬ್ಬಿಸಿದ ಸಿದ್ದು
ದಕ್ಷಿಣ ಕನ್ನಡ: ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಒಬ್ಬರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವೀರ ಸಾವರ್ಕರ್ಗೆ ಭಾರತ ರತ್ನ ಕೊಡುವ ಪ್ರಸ್ತಾಪದ ಸಂಬಂಧ ಮಾತನಾಡಿದ್ದಾರೆ. ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಸಹ ಒಬ್ಬರು. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಆದ್ರೆ, ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೆ. ಅಂತಹ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. […]
ದಕ್ಷಿಣ ಕನ್ನಡ: ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಒಬ್ಬರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವೀರ ಸಾವರ್ಕರ್ಗೆ ಭಾರತ ರತ್ನ ಕೊಡುವ ಪ್ರಸ್ತಾಪದ ಸಂಬಂಧ ಮಾತನಾಡಿದ್ದಾರೆ. ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಸಹ ಒಬ್ಬರು. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಆದ್ರೆ, ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೆ. ಅಂತಹ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ ಎಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.
ದೇಶದ ಆರ್ಥಿಕ ಸ್ಥಿತಿ ಅಧೋಗತಿ: ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಹಸಿವಿನ ರೇಟಿಂಗಲ್ಲಿ ಭಾರತ 102ನೇ ಸ್ಥಾನಕ್ಕೆ ಮುಟ್ಟಿದೆ. ಪಾಕಿಸ್ತಾನ, ಬಾಂಗ್ಲಾದೇಶ ನಮ್ಮಿಂದ ಮುಂದಿದೆ. ಕಳೆದ ಐದು ವರ್ಷದಲ್ಲಿ ಮೋದಿ ಮಾಡಿದ ಸಾಧನೆ ಇದು. ಅಮೆರಿಕಕ್ಕೆ ಹೋಗಿ ಭಾರತದಲ್ಲಿ ಎಲ್ಲರೂ ಸುಖವಾಗಿದ್ದಾರೆ ಅಂತಾರೆ. ಆದ್ರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನಮ್ಮ ಮಾನ ಹರಾಜು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 3:16 pm, Fri, 18 October 19