75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಕೇಂದ್ರ ಸರ್ಕಾರದಿಂದ ಸಮಿತಿ ರಚನೆ… ಕರಾವಳಿಯ ಇಬ್ಬರು ಗಣ್ಯರು ಆಯ್ಕೆ
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಯಾಗಿದ್ದು ಈ ಸಮಿತಿಯ ಸದಸ್ಯರಾಗಿ ಕರಾವಳಿಯ ಇಬ್ಬರು ಗಣ್ಯರು ಆಯ್ಕೆಯಾಗಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಪದ್ಮವಿಭೂಷಣ ಡಾ.ಬಿ.ಎಂ.ಹೆಗ್ಡೆ ಆಯ್ಕೆಯಾಗಿದ್ದಾರೆ.
ಮಂಗಳೂರು: ದೇಶದ 75ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಯಾಗಿದ್ದು ಈ ಸಮಿತಿಯ ಸದಸ್ಯರಾಗಿ ಕರಾವಳಿಯ ಇಬ್ಬರು ಗಣ್ಯರು ಆಯ್ಕೆಯಾಗಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಪದ್ಮವಿಭೂಷಣ ಡಾ.ಬಿ.ಎಂ.ಹೆಗ್ಡೆ ಆಯ್ಕೆಯಾಗಿದ್ದಾರೆ. ಆಯ್ಕೆ ಕುರಿತಂತೆ ವಿರೇಂದ್ರ ಹೆಗ್ಗಡೆ ಸಂತಸ ವ್ಯಕ್ತಪಡಿಸಿದ್ದಾರೆ.
75ನೇ ವರ್ಷಕ್ಕೆ ಸ್ವಾತಂತ್ರ್ಯ ಭಾರತವನ್ನು ತಲುಪಿದ್ದೇವೆ ಎಂಬುದು ದೊಡ್ಡ ವಿಷಯ. ಈ ಎಲ್ಲಾ ಪರಿವರ್ತನೆಗೆ ನಾನು ಸಾಕ್ಷಿಯಾಗಿದ್ದೇನೆ. ಈ ಅವಧಿಯಲ್ಲಿ ದೇಶ ಏನೆಲ್ಲಾ ಅಭಿವೃದ್ಧಿ ಕಂಡಿದೆ ಎಂಬುದನ್ನು ನೋಡಿದ್ದೇನೆ. ಕೆಲ ಯೋಜನೆಯನ್ನು ಜಾರಿಗೊಳಿಸುವಂತೆ ಕೇಂದ್ರಕ್ಕೆ ಸಲಹೆ ನೀಡುತ್ತೇನೆ. ಕೇಂದ್ರ ಕೊಡುವ ಸಲಹೆಗಳನ್ನು ಇಲ್ಲಿ ಅನುಷ್ಠಾನಗೊಳಿಸುತ್ತೇವೆ ಎಂದು ಹೇಳಿದ್ರು.
ಬಹುತೇಕ ಒಂದು ವರ್ಷದ ಬಳಿಕ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮೋದಿಯವರು 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ದೇಶದ 75 ಸ್ಥಳಗಳಲ್ಲಿ 75 ವಾರಗಳವರೆಗೆ ಭವ್ಯ ಉತ್ಸವ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ತಿಳಿಸಿದ್ದರು. ಅದರಂತೆ ಮಾರ್ಚ್ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿನ ಸಾಬರಮತಿ (SABARAMATI) ಆಶ್ರಮದಿಂದ ಆರಂಭಗೊಳ್ಳಲಿರುವ 23 ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದ್ದರು.
ಮುಂದಿನ ವರ್ಷ ಸ್ವಾತಂತ್ರ್ಯ ದೊರೆತು 75 ವರ್ಷವಾಗಲಿದೆ. ಈ ಸಂದರ್ಭ ದೇಶಕ್ಕೆ ಗೌರವದಾಯಕ, ಐತಿಹಾಸಿಕ ಸಮಯವಾಗಿದ್ದು, ಇಂದಿನಿಂದ ಚರಕ ಅಭಿಯಾನವನ್ನೂ ಆರಂಭಿಸಲಾಗಿದೆ. 2023ರವರೆಗೂ ಅಮೃತ ಮಹೋತ್ಸವ ಕಾರ್ಯಕ್ರಮ ದೇಶಾದ್ಯಂತ ಜರುಗಲಿದ್ದು, ದೇಶಕ್ಕಾಗಿ ಬಲಿದಾನ ಮಾಡಿದವರಿಗೆ ನಾನು ನಮಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.
ಇದನ್ನೂ ಓದಿ: 75 Years 0f India’s Independence: ಕಿತ್ತೂರು ಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ