44 ಫ್ಲೈ ಓವರ್​ ಬಂದ್, ಹೊಸ ವರ್ಷ ಹಿನ್ನೆಲೆ ವಾಹನಗಳ ಸಂಚಾರ ನಿಷೇಧ: ಎಲ್ಲೆಲ್ಲಿ?

ಕೊರೊನಾ ಸೋಂಕಿನ ಅಟ್ಟಹಾಸದಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ಅನಿವಾರ್ಯವಾಗಿ ನಿರ್ಬಂಧ ಹೇರಲಾಗಿದ್ದು, ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ 1ರ ಮುಂಜಾನೆ 2ರವರೆಗೆ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ಪಾರ್ಕ್ ರಸ್ತೆ, ರೆಸಿಡೆನ್ಸಿ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ಪ್ರವೇಶವನ್ನು ನಿಷೇಧಿಸಲಾಗಿದೆ.

44 ಫ್ಲೈ ಓವರ್​ ಬಂದ್, ಹೊಸ ವರ್ಷ ಹಿನ್ನೆಲೆ ವಾಹನಗಳ ಸಂಚಾರ ನಿಷೇಧ: ಎಲ್ಲೆಲ್ಲಿ?
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Follow us
sandhya thejappa
|

Updated on:Dec 29, 2020 | 1:25 PM

ಬೆಂಗಳೂರು: ಡಿಸೆಂಬರ್ 31ರಂದು ಹೊಸ ವರ್ಷಾಚರಣೆ ಹಿನ್ನೆಲೆ ವಾಹನಗಳ ಸಂಚಾರ ಮತ್ತು ಪ್ರವೇಶವನ್ನು ನಿಷೇಧಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ಸೋಂಕಿನ ಅಟ್ಟಹಾಸದಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ಅನಿವಾರ್ಯವಾಗಿ ನಿರ್ಬಂಧ ಹೇರಲಾಗಿದ್ದು, ಡಿಸೆಂಬರ್ 31ರ ರಾತ್ರಿ 8ರಿಂದ ಜನವರಿ 1ರ ಮುಂಜಾನೆ 2ರವರೆಗೆ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ಪಾರ್ಕ್ ರಸ್ತೆ, ರೆಸಿಡೆನ್ಸಿ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ಪ್ರವೇಶವನ್ನು ನಿಷೇಧಿಸಲಾಗಿದೆ.

ಡಿಸೆಂಬರ್ 31ರ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಮೈಕೋ ಲೇಔಟ್, ಏರ್ಪೋರ್ಟ್, ವೈಟ್​​ ಫೀಲ್ಡ್​​, ಹೆಚ್ಎಸ್ಆರ್ ಲೇಔಟ್, ಹಲಸೂರು, ಕೆ.ಆರ್.ಪುರ, ಪುಲಿಕೇಶಿನಗರ, ಬಾಣಸವಾಡಿ, ಆಡುಗೋಡಿ, ಮೈಸೂರು ರಸ್ತೆ, ಬಸವನಗುಡಿ, ಜಯನಗರ, ಮಲ್ಲೇಶ್ವರಂ, ಬನಶಂಕರಿ, ಕೆಂಗೇರಿ, ಯಶವಂತಪುರ, ಹೆಬ್ಬಾಳ, ಹಾಗೂ ಪೀಣ್ಯ ಪ್ರದೇಶಗಳಲ್ಲಿರುವ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಒಟ್ಟು 44 ಫ್ಲೈ ಓವರ್​ಗಳು ಬಂದ್ ಹೊಸ ವರ್ಷ ಸಂಭ್ರಮಾಚರಣೆ ನಿಷೇಧವಿದ್ದರೂ ಗುಂಪು ಸೇರುವುದು ಹಾಗೂ ಫ್ಲೈ ಓವರ್ ಮೇಲೆ ವೀಲಿಂಗ್ ಮತ್ತು ಡ್ರ್ಯಾಗ್​​ ರೇಸ್ ಮಾಡುವ ಸಾಧ್ಯತೆ ಹೆಚ್ಚಿದ್ದು ಡಿಸೆಂಬರ್ 31ರ ರಾತ್ರಿ 10 ರಿಂದ ಜನವರಿ 1 ಬೆಳಗ್ಗೆ 6 ಗಂಟೆ ವರೆಗೆ ನಗರದ ಒಟ್ಟು 44  ಫ್ಲೈ ಓವರ್​ಗಳನ್ನು ಬಂದ್ ಮಾಡಲಾಗುತ್ತದೆ.

ವಾಹನ ನಿಲುಗಡೆ ನಿಷೇಧ ಪೊಲೀಸ್ ವಾಹನ ಹಾಗೂ ಕರ್ತವ್ಯ ನಿರತ ತುರ್ತು ವಾಹನಗಳನ್ನು ಹೊರತುಪಡಿಸಿ ಎಂಜಿ ರೋಡ್, ಚರ್ಚ್  ರೋಡ್, ಮ್ಯುಜಿಯಮ್ ರೋಡ್, ರೆಸ್ಟ್ ಹೌಸ್ ಪಾರ್ಕ್​ ರೋಡ್ ಮತ್ತು ರೆಸಿಡೆನ್ಸಿ ರೋಡ್​ ಸೇರಿದಂತೆ ಟ್ರಿನಿಟಿ ರಸ್ತೆ, ಇನ್ಪ್ರೆಟ್ರಿ ರಸ್ತೆ , ಬ್ರಿಗೆಡ್ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ.

ನ್ಯೂ ಇಯರ್ ಸಂಭ್ರಮಕ್ಕೆ ಹೆಮ್ಮಾರಿ ಶಾಕ್, ದೇಶದ ಈ 4 ರಾಜ್ಯಗಳಲ್ಲಿ ಹಲವು ನಿರ್ಬಂಧ..

Published On - 1:19 pm, Tue, 29 December 20

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ