ವಿಧಾನಸೌಧ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ವಿಧಾನಸೌಧ ಮತ್ತು ವಿಕಾಸಸೌಧಗಳನ್ನ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಿಂದಿನ ದಿನವೇ ವಿಕಾಸಸೌಧ ಸಿಬ್ಬಂದಿಗೆ ರಜೆ ಘೋಷಿಸಿದೆ. ನಂತರ ವಿಕಾಸಸೌಧಕ್ಕೆ ಶುಕ್ರವಾರ ಇಡೀ ದಿನ ಸ್ಯಾನಿಟೈಸ್‌ ಮಾಡಲಾಗಿದೆ. ಇನ್ನೇನು ಎಲ್ಲ ಸರಿಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಆಘಾತ ಬಂದೊದಗಿದೆ. ವಿಧಾನಸೌಧದ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಇರುವುದು ಕನ್ಫರ್ಮ್​‌ ಆಗಿದೆ. ರಜೆ ಮೇಲಿದ್ದ ವಿಧಾನಸೌಧ ಸಿಬ್ಬಂದಿಗೆ ಕೊರೊನಾ: ಕಳೆದ ಆರು […]

ವಿಧಾನಸೌಧ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ
Follow us
Guru
| Updated By:

Updated on:Jun 20, 2020 | 5:22 PM

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ವಿಧಾನಸೌಧ ಮತ್ತು ವಿಕಾಸಸೌಧಗಳನ್ನ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರ ಹಿಂದಿನ ದಿನವೇ ವಿಕಾಸಸೌಧ ಸಿಬ್ಬಂದಿಗೆ ರಜೆ ಘೋಷಿಸಿದೆ. ನಂತರ ವಿಕಾಸಸೌಧಕ್ಕೆ ಶುಕ್ರವಾರ ಇಡೀ ದಿನ ಸ್ಯಾನಿಟೈಸ್‌ ಮಾಡಲಾಗಿದೆ. ಇನ್ನೇನು ಎಲ್ಲ ಸರಿಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಆಘಾತ ಬಂದೊದಗಿದೆ. ವಿಧಾನಸೌಧದ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಇರುವುದು ಕನ್ಫರ್ಮ್​‌ ಆಗಿದೆ.

ರಜೆ ಮೇಲಿದ್ದ ವಿಧಾನಸೌಧ ಸಿಬ್ಬಂದಿಗೆ ಕೊರೊನಾ: ಕಳೆದ ಆರು ದಿನಗಳಿಂದ ರಜೆಯ ಮೇಲಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಜತೆಗೆ ಅವರ ಪತ್ನಿಗೂ ಕೊರೊನಾ ಸೋಂಕಿರೋದು ಪತ್ತೆಯಾಗಿದೆ. ಆಘಾತಕಾರಿಯಂದ್ರೆ ಈ ಸಿಬ್ಬಂದಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರದ ಸುದ್ದಿಗೋಷ್ಠಿಯಲ್ಲೂ ಭಾಗಿಯಾಗಿದ್ರು. ಸಂಬಂಧಿಕರ ಮದುವೆ ನೆಪದಲ್ಲಿ ಕಳೆದ ಒಂದು ವಾರದಿಂದ ಸಿಬ್ಬಂದಿ ರಜೆ ಮೇಲಿದ್ದರು.

ನಾಲ್ಕು ದಿನಗಳ ಹಿಂದೆ ವಿಕಾಸಸೌಧದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಇದೀಗ ವಿಧಾನಸೌಧವನ್ನೂ ಕೂಡಾ ಈಗ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗ್ತಿದೆ. ಈ ನಡುವೆ ಆರೋಗ್ಯಾಧಿಕಾರಿಗಳು ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರ ಶೋಧಕ್ಕಾಗಿ ಹರಸಾಹಸಪಡುತ್ತಿದ್ದಾರೆ.

Published On - 5:21 pm, Sat, 20 June 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ