
ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
Published On - 2:36 pm, Thu, 18 June 20