ಜೂಜಿನಲ್ಲಿ ಹಣ ಕಳೆದುಕೊಂಡಿದ್ದ ಗ್ರಾಮ ಪಂಚಾಯಿತಿ ಸದಸ್ಯ ಆತ್ಮಹತ್ಯೆ

ಶಿವಮೊಗ್ಗ: ಜೂಜಿನಲ್ಲಿ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲಾಗದೆ ಗ್ರಾಮ ಪಂಚಾಯಿತಿ ಸದಸ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಣಗೆರೆಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಿಧಿಗೆ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್(40) ನೇಣಿಗೆ ಶರಣಾದವರು. ಒಂದು ಎಕರೆ ಜಮೀನು ಮಾರಿ ಜೂಜು ಆಟದಲ್ಲಿ ಹಣ ಕಳೆದುಕೊಂಡಿದ್ದನು. ಮೂರು ದಿನಗಳ ಹಿಂದೆ ಈತ ಮನೆಯಿಂದ ನಾಪತ್ತೆಯಾಗಿದ್ದ. ಸಾಲ ವಿಪರೀತ ಆದ ಕಾರಣ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಣಗೆರೆಕಟ್ಟೆ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕುಂಸಿ ಪೊಲೀಸ್ […]

ಜೂಜಿನಲ್ಲಿ ಹಣ ಕಳೆದುಕೊಂಡಿದ್ದ ಗ್ರಾಮ ಪಂಚಾಯಿತಿ ಸದಸ್ಯ ಆತ್ಮಹತ್ಯೆ
Edited By:

Updated on: Jun 27, 2020 | 3:16 PM

ಶಿವಮೊಗ್ಗ: ಜೂಜಿನಲ್ಲಿ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲಾಗದೆ ಗ್ರಾಮ ಪಂಚಾಯಿತಿ ಸದಸ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಣಗೆರೆಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಿಧಿಗೆ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್(40) ನೇಣಿಗೆ ಶರಣಾದವರು.

ಒಂದು ಎಕರೆ ಜಮೀನು ಮಾರಿ ಜೂಜು ಆಟದಲ್ಲಿ ಹಣ ಕಳೆದುಕೊಂಡಿದ್ದನು. ಮೂರು ದಿನಗಳ ಹಿಂದೆ ಈತ ಮನೆಯಿಂದ ನಾಪತ್ತೆಯಾಗಿದ್ದ. ಸಾಲ ವಿಪರೀತ ಆದ ಕಾರಣ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಣಗೆರೆಕಟ್ಟೆ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.