AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲಸೌಕರ್ಯಕ್ಕೆ ಆಗ್ರಹಿಸಿ, ರೊಚ್ಚಿಗೆದ್ದ ಗ್ರಾಮಸ್ಥರಿಂದ ಗ್ರಾ.ಪಂ. ಚುನಾವಣೆ ಬಹಿಷ್ಕರಿಸಲು ನಿರ್ಧಾರ

ಮೂಲಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಬಸವೇಶ್ವರನಗರ ಮತದಾರರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಮೂಲಸೌಕರ್ಯಕ್ಕೆ ಆಗ್ರಹಿಸಿ, ರೊಚ್ಚಿಗೆದ್ದ ಗ್ರಾಮಸ್ಥರಿಂದ ಗ್ರಾ.ಪಂ. ಚುನಾವಣೆ ಬಹಿಷ್ಕರಿಸಲು ನಿರ್ಧಾರ
ಬಸವೇಶ್ವರ ನಗರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ
ಆಯೇಷಾ ಬಾನು
| Edited By: |

Updated on: Dec 17, 2020 | 10:54 AM

Share

ತುಮಕೂರು: ಮೂಲಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮತದಾರರು ಬಹಿಷ್ಕರಿಸಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಬಸವೇಶ್ವರನಗರ ನಿವಾಸಿಗಳು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ.

ಇನ್ನು ಬಸವೇಶ್ವರ ನಗರದಲ್ಲಿ 500 ಕ್ಕೂ ಅಧಿಕ ಮತದಾರರಿದ್ದಾರೆ. ನಗರಕ್ಕೆ ನಾಲ್ಕೆದು ತಿಂಗಳುಗಳಿಂದ ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದೆ. ಚರಂಡಿ ಸ್ವಚ್ಛಗೊಳಿಸುವಲ್ಲಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಜನ ಚುನಾವಣೆ ಬಹಿಷ್ಕರಿಸಿದ್ದಾರೆ.

ಸದ್ಯ ಗ್ರಾಮಕ್ಕೆ ಚುನಾವಣೆ ಅಧಿಕಾರಿಗಳು ಭೇಟಿ ನೀಡಿದ್ದು ಗ್ರಾಮಸ್ಥರ ಮನವೊಲಿಸುವ ಕಾರ್ಯ‌ ಮಾಡುತ್ತಿದ್ದಾರೆ. ಆದರೆ ಅಧಿಕಾರಿಗಳ ಮಾತಿಗೆ ಬಸವೇಶ್ವರ ನಗರದ ಮತದಾರರು ಜಗ್ಗುತ್ತಿಲ್ಲ. ಮುಂದೆ ಅಧಿಕಾರಿಗಳ ಈ ಪ್ರಯತ್ನ ಎಷ್ಟರ ಮಟ್ಟಿಗೆ ಸಫಲತೆ ಕಾಣುತ್ತದೆ ಎಂದು ನೋಡ ಬೇಕಿದೆ.

ಇಮ್ಮಾವು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಎಲೆಕ್ಷನ್ ಬಹಿಷ್ಕಾರ