ತುಮಕೂರು: ಮೂಲಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮತದಾರರು ಬಹಿಷ್ಕರಿಸಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಬಸವೇಶ್ವರನಗರ ನಿವಾಸಿಗಳು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ.
ಇನ್ನು ಬಸವೇಶ್ವರ ನಗರದಲ್ಲಿ 500 ಕ್ಕೂ ಅಧಿಕ ಮತದಾರರಿದ್ದಾರೆ. ನಗರಕ್ಕೆ ನಾಲ್ಕೆದು ತಿಂಗಳುಗಳಿಂದ ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದೆ. ಚರಂಡಿ ಸ್ವಚ್ಛಗೊಳಿಸುವಲ್ಲಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಜನ ಚುನಾವಣೆ ಬಹಿಷ್ಕರಿಸಿದ್ದಾರೆ.
ಸದ್ಯ ಗ್ರಾಮಕ್ಕೆ ಚುನಾವಣೆ ಅಧಿಕಾರಿಗಳು ಭೇಟಿ ನೀಡಿದ್ದು ಗ್ರಾಮಸ್ಥರ ಮನವೊಲಿಸುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಅಧಿಕಾರಿಗಳ ಮಾತಿಗೆ ಬಸವೇಶ್ವರ ನಗರದ ಮತದಾರರು ಜಗ್ಗುತ್ತಿಲ್ಲ. ಮುಂದೆ ಅಧಿಕಾರಿಗಳ ಈ ಪ್ರಯತ್ನ ಎಷ್ಟರ ಮಟ್ಟಿಗೆ ಸಫಲತೆ ಕಾಣುತ್ತದೆ ಎಂದು ನೋಡ ಬೇಕಿದೆ.