ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮುಂಗಾರು ರೌದ್ರ ರೂಪ ತಾಳಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯ ಆರ್ಭಟದಿಂದ ಉತ್ತರ ಕರ್ನಾಟಕದ ಕೆಲವೆಡೆ ರೈತರು ಬೆಳೆದ ಬೆಳೆ ಸಾಕಷ್ಟು ಹಾನಿಗೊಳಗಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಕೆರೆ ಈಗಾಗಲೇ ಭರ್ತಿಯಾಗಿದ್ದು, ಕೆರೆಗೆ ಅಡ್ಡಲಾಗಿ ಕಟ್ಟಿರುವ ಕಟ್ಟೆ ಒಡೆಯುವ ಭೀತಿ ಆ ಭಾಗದ ಜನರಿಗೆ ಎದುರಾಗಿದೆ.
ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೆರೆಯನ್ನು ದುರಸ್ತಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು ಸಹ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಗ್ರಾಮಸ್ಥರು ಜೀವಭಯದಲ್ಲಿ ಬದುಕುತ್ತಿದ್ದು ಆದಷ್ಟು ಬೇಗ ದುರಸ್ತಿಗೊಳಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
Published On - 12:20 pm, Sun, 26 July 20