AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಮಳೆ ಮಧ್ಯೆ.. ತುಂಬಿ ಹರಿಯುವ ಹಳ್ಳದಲ್ಲಿ ಶವ ಸಾಗಿಸಿದ ಗ್ರಾಮಸ್ಥರು

ರಾಯಚೂರು:ಎರಡು ದಿನಗಳಿಂದ ರಾಯಚೂರು ತಾಲ್ಲೂಕಿನಲ್ಲಿ ಭಾರಿ ಮಳೆ ಹಿನ್ನೆಲೆಯಿಂದಾಗಿ ತುಂಬಿ ಹರಿಯುವ ಹಳ್ಳದಲ್ಲಿ ಅನಾಥ ಶವ ಸಾಗಿಸಿ ಅಂತ್ಯಕ್ರಿಯೆ ಮಾಡಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ. ರಾಯಚೂರ ತಾಲ್ಲೂಕಿನ ರಘುನಾಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರು ಅನಾಥ ಶವವನ್ನು ತುಂಬಿ ಹರಿಯುವ ಹಳ್ಳದಲ್ಲಿ ಸಾಗಿಸಿ ಅಂತ್ಯಕ್ರಿಯೆ ಮಾಡಿದ್ದಾರೆ. ರಘುನಾಥಹಳ್ಳಿ ಗ್ರಾಮದ‌ ಪರಿಶಿಷ್ಟ ಜನಾಂಗದ ಜನರು ಅಂತ್ಯಸಂಸ್ಕಾರಕ್ಕೆ 3 ಕಿ.ಮಿ. ದೂರ ತೆರಳಬೇಕು. ಹೀಗಾಗಿ ಗ್ರಾಮಕ್ಕೆ ಪ್ರತ್ಯೇಕ ರುದ್ರಭೂಮಿ ಮಂಜೂರಿಗೆ ಹತ್ತಾರು ಬಾರಿ ಮನವಿ ಮಾಡಿದ್ದರೂ […]

ರಾಯಚೂರಿನಲ್ಲಿ ಮಳೆ ಮಧ್ಯೆ.. ತುಂಬಿ ಹರಿಯುವ ಹಳ್ಳದಲ್ಲಿ ಶವ ಸಾಗಿಸಿದ ಗ್ರಾಮಸ್ಥರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 17, 2020 | 10:38 AM

Share

ರಾಯಚೂರು:ಎರಡು ದಿನಗಳಿಂದ ರಾಯಚೂರು ತಾಲ್ಲೂಕಿನಲ್ಲಿ ಭಾರಿ ಮಳೆ ಹಿನ್ನೆಲೆಯಿಂದಾಗಿ ತುಂಬಿ ಹರಿಯುವ ಹಳ್ಳದಲ್ಲಿ ಅನಾಥ ಶವ ಸಾಗಿಸಿ ಅಂತ್ಯಕ್ರಿಯೆ ಮಾಡಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ.

ರಾಯಚೂರ ತಾಲ್ಲೂಕಿನ ರಘುನಾಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರು ಅನಾಥ ಶವವನ್ನು ತುಂಬಿ ಹರಿಯುವ ಹಳ್ಳದಲ್ಲಿ ಸಾಗಿಸಿ ಅಂತ್ಯಕ್ರಿಯೆ ಮಾಡಿದ್ದಾರೆ. ರಘುನಾಥಹಳ್ಳಿ ಗ್ರಾಮದ‌ ಪರಿಶಿಷ್ಟ ಜನಾಂಗದ ಜನರು ಅಂತ್ಯಸಂಸ್ಕಾರಕ್ಕೆ 3 ಕಿ.ಮಿ. ದೂರ ತೆರಳಬೇಕು.

ಹೀಗಾಗಿ ಗ್ರಾಮಕ್ಕೆ ಪ್ರತ್ಯೇಕ ರುದ್ರಭೂಮಿ ಮಂಜೂರಿಗೆ ಹತ್ತಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಗ್ರಾಮಸ್ಥರು ನಿನ್ನೆ ಹಳ್ಳ ತುಂಬಿ ಹರಿಯುತಿದ್ರು ಹಳ್ಳದಲ್ಲೆ ಶವ ಹೊತ್ತೊಯ್ದು ಅಂತ್ಯಸಂಸ್ಕಾರ ಮಾಡಿದ್ದಾರೆ. ಗ್ರಾಮಕ್ಕೆ ಪ್ರತ್ಯೇಕ ರುದ್ರಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು