ರಾಯಚೂರು:ಎರಡು ದಿನಗಳಿಂದ ರಾಯಚೂರು ತಾಲ್ಲೂಕಿನಲ್ಲಿ ಭಾರಿ ಮಳೆ ಹಿನ್ನೆಲೆಯಿಂದಾಗಿ ತುಂಬಿ ಹರಿಯುವ ಹಳ್ಳದಲ್ಲಿ ಅನಾಥ ಶವ ಸಾಗಿಸಿ ಅಂತ್ಯಕ್ರಿಯೆ ಮಾಡಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ.
ರಾಯಚೂರ ತಾಲ್ಲೂಕಿನ ರಘುನಾಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರು ಅನಾಥ ಶವವನ್ನು ತುಂಬಿ ಹರಿಯುವ ಹಳ್ಳದಲ್ಲಿ ಸಾಗಿಸಿ ಅಂತ್ಯಕ್ರಿಯೆ ಮಾಡಿದ್ದಾರೆ. ರಘುನಾಥಹಳ್ಳಿ ಗ್ರಾಮದ ಪರಿಶಿಷ್ಟ ಜನಾಂಗದ ಜನರು ಅಂತ್ಯಸಂಸ್ಕಾರಕ್ಕೆ 3 ಕಿ.ಮಿ. ದೂರ ತೆರಳಬೇಕು.
ಹೀಗಾಗಿ ಗ್ರಾಮಕ್ಕೆ ಪ್ರತ್ಯೇಕ ರುದ್ರಭೂಮಿ ಮಂಜೂರಿಗೆ ಹತ್ತಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಗ್ರಾಮಸ್ಥರು ನಿನ್ನೆ ಹಳ್ಳ ತುಂಬಿ ಹರಿಯುತಿದ್ರು ಹಳ್ಳದಲ್ಲೆ ಶವ ಹೊತ್ತೊಯ್ದು ಅಂತ್ಯಸಂಸ್ಕಾರ ಮಾಡಿದ್ದಾರೆ. ಗ್ರಾಮಕ್ಕೆ ಪ್ರತ್ಯೇಕ ರುದ್ರಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.