AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಗೆ ಮುಳ್ಳು ಹಚ್ಚಿ ಜನರಿಂದ ತೀವ್ರ ಆಕ್ರೋಶ, ಯಾಕೆ?

ಬಾಗಲಕೋಟೆ: ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಹೀಗಾಗಿ ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಮಳೆ ನೀರು ಮನೆಗಳಿಗೆ ಪ್ರವೇಶಿಸುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರತಿ ವರ್ಷ ಮಳೆ ಬಂದಾಗಲೆಲ್ಲ ಜನ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಯಾವುದೇ ಯೋಜನೆಯನ್ನು ಮಾಡುತ್ತಿಲ್ಲ. ಜನರ ಸಹಾಯಕ್ಕೆ ಮುಂದಾಗುತ್ತಿಲ್ಲ. ಹೀಗಾಗಿ ಗ್ರಾಮದ ಜನ ಸರ್ಕಾರ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಹುನಗುಂದದಲ್ಲಿ ರಾಷ್ಟ್ರೀಯ ಹೆದ್ದಾರಿ 50ರ ಹೊಸಪೇಟೆ-ಸೊಲ್ಲಾಪುರ ಹೆದ್ದಾರಿಗೆ ಮುಳ್ಳು ಹಾಕಿ ಸಂಚಾರ ಬಂದ್ ಮಾಡಿ ಅಮರಾವತಿ, ಕರಡಿ ಭಾಗದ ಜನರು […]

ರಾಷ್ಟ್ರೀಯ ಹೆದ್ದಾರಿಗೆ ಮುಳ್ಳು ಹಚ್ಚಿ ಜನರಿಂದ ತೀವ್ರ ಆಕ್ರೋಶ, ಯಾಕೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 01, 2020 | 12:27 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಹೀಗಾಗಿ ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಮಳೆ ನೀರು ಮನೆಗಳಿಗೆ ಪ್ರವೇಶಿಸುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರತಿ ವರ್ಷ ಮಳೆ ಬಂದಾಗಲೆಲ್ಲ ಜನ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಯಾವುದೇ ಯೋಜನೆಯನ್ನು ಮಾಡುತ್ತಿಲ್ಲ. ಜನರ ಸಹಾಯಕ್ಕೆ ಮುಂದಾಗುತ್ತಿಲ್ಲ. ಹೀಗಾಗಿ ಗ್ರಾಮದ ಜನ ಸರ್ಕಾರ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಹುನಗುಂದದಲ್ಲಿ ರಾಷ್ಟ್ರೀಯ ಹೆದ್ದಾರಿ 50ರ ಹೊಸಪೇಟೆ-ಸೊಲ್ಲಾಪುರ ಹೆದ್ದಾರಿಗೆ ಮುಳ್ಳು ಹಾಕಿ ಸಂಚಾರ ಬಂದ್ ಮಾಡಿ ಅಮರಾವತಿ, ಕರಡಿ ಭಾಗದ ಜನರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.

ಹುನಗುಂದ, ಅಮರಾವತಿ, ಕರಡಿ ರಸ್ತೆ ಮಳೆ ಬಂದಾಗೆಲ್ಲ ಬಂದ್ ಆಗುತ್ತಿರುತ್ತದೆ. ಹೆದ್ದಾರಿಯ ಅಂಡರ್ ಪಾಸ್​ನಲ್ಲಿ ಅಪಾರ ನೀರು ನಿಂತು ಹತ್ತಾರು ಗ್ರಾಮಗಳ ಸಂಪರ್ಕ ಬಂದ್ ಆಗುತ್ತಿದೆ.

ಜೊತೆಗೆ ಹಳ್ಳದ ನೀರು ಸೇರಿ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದನ್ನು ಸರಿಪಡಿಸುವಂತೆ ಒತ್ತಾಯ ಮಾಡಿದ್ರೂ ಸರ್ಕಾರ ಮಾತ್ರ ಕ್ಯಾರೆ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಬಂದ್ ಮಾಡಿದ್ದರಿಂದ ಅಪಾರ ಸಂಖ್ಯೆಯ ವಾಹನಗಳು ಸಾಲಿನಲ್ಲಿ ನಿಂತಿವೆ. ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್