AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ತುಂಬಿ ಹರಿಯುವ ನದಿಯಲ್ಲಿ ಹುಡುಗಿಯರ ‘ಸೆಲ್ಫಿ’ ಚೆಲ್ಲಾಟ

ಬೆಳಗಾವಿ: ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಹಾಗೇನೆ ಪಕ್ಕದ ಮಹಾರಾಷ್ಟ್ರದಲ್ಲಿ ಕೂಡಾ ಸತತವಾಗಿ ಮಳೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹಾದು ಹೋಗುವ ನದಿಗಳಲ್ಲಿ ಮಹಾಪೂರ ಬಂದಿದ್ದು, ತುಂಬಿ ಹರಿಯುತ್ತಿವೆ. ಅದ್ರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಸೇತುವೆ ನೀರಲ್ಲಿ ಮುಳುಗಿದ್ದು, ಸ್ಥಳೀಯರು ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಚಿಕ್ಕ ಮಕ್ಕಳು ಹರಿಯುವ ನದಿನೀರಿನಲ್ಲಿಯೇ ಆಟವಾಡುತ್ತಿದ್ದಾರೆ. ಹೌದು ಸತತ ಮಳೆಯ ಅಬ್ಬರಕ್ಕೆ ಬೆಳಗಾವಿಯೂ ನಲುಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯ […]

ಭಾರೀ ಮಳೆಗೆ ತುಂಬಿ ಹರಿಯುವ ನದಿಯಲ್ಲಿ ಹುಡುಗಿಯರ 'ಸೆಲ್ಫಿ' ಚೆಲ್ಲಾಟ
Guru
| Updated By: ಸಾಧು ಶ್ರೀನಾಥ್​|

Updated on: Aug 06, 2020 | 5:59 PM

Share

ಬೆಳಗಾವಿ: ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಹಾಗೇನೆ ಪಕ್ಕದ ಮಹಾರಾಷ್ಟ್ರದಲ್ಲಿ ಕೂಡಾ ಸತತವಾಗಿ ಮಳೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹಾದು ಹೋಗುವ ನದಿಗಳಲ್ಲಿ ಮಹಾಪೂರ ಬಂದಿದ್ದು, ತುಂಬಿ ಹರಿಯುತ್ತಿವೆ. ಅದ್ರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮವೊಂದರ ಸೇತುವೆ ನೀರಲ್ಲಿ ಮುಳುಗಿದ್ದು, ಸ್ಥಳೀಯರು ಸರಿಯಾದ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಪರಿಣಾಮ ಚಿಕ್ಕ ಮಕ್ಕಳು ಹರಿಯುವ ನದಿನೀರಿನಲ್ಲಿಯೇ ಆಟವಾಡುತ್ತಿದ್ದಾರೆ.

ಹೌದು ಸತತ ಮಳೆಯ ಅಬ್ಬರಕ್ಕೆ ಬೆಳಗಾವಿಯೂ ನಲುಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿರುವ ಸೇತುವೆ ಮುಳುಗಿ ಮಲಪ್ರಭಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಆದ್ರೂ ಮುಳುಗಡೆಯಾದ ಸೇತುವೆ ಮೇಲೆ ಮಹಿಳೆಯರು ಮತ್ತು ಮಕ್ಕಳು ಮೋಜು ಮಾಡುತ್ತಿದ್ದಾರೆ.

ರಭಸವಾಗಿ ಹರಿಯುವ ನದಿ ನೀರಿನಲ್ಲಿ ಮಕ್ಕಳೊಂದಿಗೆ ಮಹಿಳೆಯರು ಮತ್ತು ಯುವತಿಯರು ಕೂಡಾ ಮಕ್ಕಳಿಗೆ ತಿಳಿವಳಿಕೆ ಹೇಳುವುದನ್ನು ಬಿಟ್ಟು ಅವರೊಂದಿಗೆ ಆಟವಾಡುತ್ತಿದ್ದಾರೆ.

ಇದಕ್ಕಿಂತ ಆಘಾತಕಾರಿಯಂದ್ರೆ ಕೆಲವರು ತುಂಬಿ ಹರಿಯುವ ನದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಹಿರೇಮುನವಳ್ಳಿ ಗ್ರಾಮದ ಕೆಲ ಜನರ ಈ ಬೇಜವಾಬ್ದಾರಿ ಈಗ ಆತಂಕಕ್ಕೆ ಕಾರಣವಾಗಿದೆ.

ಸ್ಥಳೀಯ ಪೊಲೀಸರು ಕೂಡಾ ಮುಳುಗಡೆಯಾದ ಸೇತುವೆಗೆ ಬ್ಯಾರಿಕೇಡ್ ಹಾಕಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಪಾರಿಶ್ವಾಡದಿಂದ ಹಿರೇಮುನವಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿರೋದ್ರಿಂದ ಪಾರಿಶ್ವಾಡ ಗ್ರಾಮಕ್ಕೆ ಸಂಪರ್ಕಿಸುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಅಂಗ್ರೊಳ್ಳಿ, ಕರ್ತನಬಾಗೇವಾಡಿ, ಇಟಗಿ, ಮುನ್ಯಾನಟ್ಟಿ, ಹಂದೂರು, ಬೀಡಿ ಸೇರಿದಂತೆ ಒಂಬತ್ತು ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಸ್ಥಗಿತವಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!