AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿಗೆ.. ಹಿಂಡಲಗಾ ಜೈಲಿನ ಕತ್ತಲೆ ಕೋಣೆಯಲ್ಲೇ ಈ ಬಾರಿಯ ದೀಪಾವಳಿ ಹಬ್ಬ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಬೆಳಗಿನ ವರದಿ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. […]

ವಿನಯ್​ ಕುಲಕರ್ಣಿಗೆ.. ಹಿಂಡಲಗಾ ಜೈಲಿನ ಕತ್ತಲೆ ಕೋಣೆಯಲ್ಲೇ ಈ ಬಾರಿಯ ದೀಪಾವಳಿ ಹಬ್ಬ
KUSHAL V
| Edited By: |

Updated on:Nov 30, 2020 | 5:23 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬೆಳಗಿನ ವರದಿ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು.

ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು ಅರ್ಜಿ ಸಲ್ಲಿಸಲಾಗಿದ್ದರೂ ಸಿಬಿಐ ತನ್ನ ಆಕ್ಷೆಪಣೆ ಇನ್ನು ಸಲ್ಲಿಸಿಲ್ಲ. ಹಾಗಾಗಿ, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯುವುದಿಲ್ಲ ಎಂದು ಹೇಳಲಾಗಿದೆ.

ಕೋರ್ಟ್‌ಗೆ ಖಾಕಿ ಸರ್ಪಗಾವಲು ಇತ್ತ, ವಿನಯ್​ ಕುಲಕರ್ಣಿಯನ್ನು ಕೋರ್ಟ್​ಗೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಭದ್ರತೆಗೆಂದು ನ್ಯಾಯಾಲಯದ ನಾಲ್ಕು ಕಡೆಗಳಲ್ಲಿ ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಜೊತೆಗೆ, ಮಾಜಿ ಸಚಿವರನ್ನು ಕರೆತಂದ ಸಿಬಿಐ ವಾಹನವನ್ನು ಯಾರೂ ಹಿಂಬಾಲಿಸದಂತೆ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದರು. ಧಾರವಾಡ ಎಸ್‌.ಪಿಗೆ ಅನಾರೋಗ್ಯವಿರುವ ಹಿನ್ನೆಲೆ ದಾವಣಗೆರೆ ಐಜಿಪಿ ಎಸ್.ರವಿ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.

ಅಷ್ಟೇ ಅಲ್ಲದೆ, ಧಾರವಾಡದ ನ್ಯಾಯಾಲಯದ ಬಳಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಕೋರ್ಟ್ ಬಳಿ ಭದ್ರತೆ ನೀಡಲಾಗಿದ್ದು 3 ಡಿವೈಎಸ್‌ಪಿ, 10 ಇನ್ಸ್‌ಪೆಕ್ಟರ್‌ಗಳು, 15 PSI ಸೇರಿದಂತೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಜೊತೆಗೆ, 3 ಕೆಎಸ್‌ಆರ್‌ಪಿ ಹಾಗೂ 5 ಸಿಎಆರ್ ತುಕಡಿಗಳನ್ನು ನ್ಯಾಯಾಲಯದ ಬಳಿ ನಿಯೋಜನೆ ಮಾಡಲಾಗಿತ್ತು. ಕೋರ್ಟ್ ಹೊರಗಡೆ ವಾಹನಗಳ ನಿಲುಗಡೆಗೆ ಸಹ ನಿರ್ಬಂಧ ಹೇರಲಾಗಿದೆ.

ಕೋರ್ಟ್‌ಗೆ ಆಗಮಿಸಿದ ಯೋಗೀಶ್ ಸಹೋದರಿ ಇತ್ತ, ವಿನಯ್ ಕುಲಕರ್ಣಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆಯಲ್ಲಿ ಅವರೊಟ್ಟಿಗೆ ಸಿಬಿಐ ಅಧಿಕಾರಿಗಳು ಸಹ ಆಗಮಿಸಿದರು. ಕೆಲವು ದಾಖಲೆಗಳ ಸಹಿತ ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಆಗಮಿಸಿದರು. ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ಸಿಬಿಐ ತಂಡ ಆಗಮಿಸಿತು. ಇದಲ್ಲದೆ, ಧಾರವಾಡ ಕೋರ್ಟ್‌ಗೆ ಯೋಗೀಶ್ ಸಹೋದರಿ ಸಹ ಆಗಮಿಸಿದರು. ಮೃತ ಯೋಗೀಶ್‌ ಗೌಡ ಸಹೋದರಿ ಅಕ್ಕಮಹಾದೇವಿ ಸಹ ಕೋರ್ಟ್​ ವಿಚಾರಣೆ ವೀಕ್ಷಿಸಲು ಆಗಮಿಸಿದರು. ಅಕ್ಕಮಹಾದೇವಿಯೊಂದಿಗೆ ಮತ್ತೊಬ್ಬ ಸಹೋದರಿ ವಿಜಯಲಕ್ಷ್ಮಿ ಕೂಡ ಬಂದಿದ್ದರು.

Published On - 1:19 pm, Mon, 9 November 20

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್