AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ರೈತ ನಿರ್ಮಿಸಿದ ದೇಸೀ ಜಲ ವಿದ್ಯುದಾಗಾರ.. ಕ್ರಿಕೆಟಿಗ VVS ಲಕ್ಷ್ಮಣ್ ಹೃದಯತುಂಬಿ ಶ್ಲಾಘನೆ!

ನರಗುಂದ ಸಮೀಪದ ಬಂಡೆಮ್ಮನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲವಿದ್ಯುತ್‌ಗಾರದ ಛಾಯಾಚಿತ್ರ ವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ರೈತನ ವಿನೂತನ ಪ್ರಯತ್ನಕ್ಕೆ ಟ್ವಿಟರ್​ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಗದಗ ರೈತ ನಿರ್ಮಿಸಿದ ದೇಸೀ ಜಲ ವಿದ್ಯುದಾಗಾರ.. ಕ್ರಿಕೆಟಿಗ VVS ಲಕ್ಷ್ಮಣ್ ಹೃದಯತುಂಬಿ ಶ್ಲಾಘನೆ!
ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡುವ ಮೂಲಕ ಗದಗ ರೈತನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
shruti hegde
|

Updated on:Jan 05, 2021 | 12:17 PM

Share

ಗದಗ: ಬಂಡಾಯದ ನಾಡು ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರೀ ಸದ್ದು ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ತಯಾರಿಸಿದ್ದ ಜಲ ವಿದ್ಯುದಾಗಾರದ ಫೋಟೋವನ್ನು ಖ್ಯಾತ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ನರಗುಂದ ಸಮೀಪದ ಬಂಡೆಮ್ಮನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲ ವಿದ್ಯುದಾಗಾರದ ಛಾಯಾಚಿತ್ರ ವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ರೈತನ ವಿನೂತನ ಪ್ರಯತ್ನಕ್ಕೆ ಟ್ವಿಟರ್​ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಕೇವಲ ಐದೇ ಸಾವಿರ ರೂ ವೆಚ್ಚದಲ್ಲಿ 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿರುವ ರೈತ ಸಿದ್ದಪ್ಪ! ಕೇವಲ 5 ಸಾವಿರ ರೂಪಾಯಿ ವೆಚ್ಚದಲ್ಲಿ ರೈತ ಸಿದ್ದಪ್ಪ, 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ಕೆಲವೇ ತಿಂಗಳು ಹರಿಯುವ ಕಾಲುವೆ ನೀರಿನಿಂದ ರೈತರು ವಿದ್ಯುತ್ ತಯಾರಿಸಿ, ವರ್ಷವಿಡೀ ನೀರು ಹರಿದರೆ ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸಬಹುದು. ಹೆಚ್ಚಿನ ಸಂಪನ್ಮೂಲವಿಲ್ಲದೇ ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಬದಲಾವಣೆ ತರಲು ಸಿದ್ದಪ್ಪ ಅವರ ಪ್ರಯತ್ನ ಮಾದರಿಯಾಗಿದೆ ಎಂದು ವಿವಿಎಸ್ ಲಕ್ಷ್ಮಣ್ ಶ್ಲಾಘಿಸಿದ್ದಾರೆ.

ರೈತ ಸಿದ್ದಪ್ಪರ ಮೊದಲ ಪ್ರಯೋಗ: 2011-12ರಲ್ಲಿ ಜಲ ವಿದ್ಯುತ್‌ಗಾರವನ್ನು ಸಿದ್ಧಪಡಿಸಿದ್ದ ಸಿದ್ದಪ್ಪ, ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಮೊದಲ ಬಾರಿಗೆ ಪ್ರಯೋಗ ಕೈಗೊಂಡಿದ್ದರು. ಪ್ಲಾಸ್ಟಿಕ್ ಬುಟ್ಟಿಗಳನ್ನು ಅಳವಡಿಸಿದ ಚಕ್ರ ತಿರುಗುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಈ ವಿದ್ಯುತ್‌ ನ್ನು ಬಂಡೆಮ್ಮನಗರದ ತೋಟದ ಮನೆಗೆ ಬಳಕೆ ಮಾಡುತ್ತಿದ್ದರು.

ಆದರೆ, ಕಾಲುವೆಯಲ್ಲಿ ನೀರಿನ ಕೊರತೆ ಹಾಗೂ ಹೆಸ್ಕಾಂ ಲೈನ್ ಬಂದಿದ್ದರಿಂದ ವಿದ್ಯುತ್ ಉತ್ಪಾದನೆಯನ್ನು ಕೈಬಿಟ್ಟಿದ್ದರು. ರೈತರು ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಇದರಲ್ಲಿ ಮತ್ತಷ್ಟು ಸುಧಾರಣೆ ತಂದು, ಹೊಸ ಮಾದರಿಯಲ್ಲಿ ವಿದ್ಯುತ್ ಉತ್ಪಾದನಾ ಉಪಕರಣಗಳನ್ನು ಆವಿಷ್ಕರಿಸುವ ಆಲೋಚನೆಯನ್ನು ಮೊದಲು ಸಿದ್ದಪ್ಪ ಹೊಂದಿದ್ದರು.

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

Published On - 12:12 pm, Tue, 5 January 21

Follow Us
shruti hegde
shruti hegde
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್