ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಅಪಾರ ನೀರು ಪೋಲು
ಗದಗ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ನೀರು ಪೋಲಾಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಪೈಪ್ ಒಡೆದು ನೀರು ಪೋಲಾಗುತ್ತಿದೆ. ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗುವುದು ಇದೇ ಪೈಪ್ ಮೂಲಕವಾಗಿದೆ. ಪೈಪ್ ಒಡೆದು ನೀರಿನ ರಭಸಕ್ಕೆ ಕಾರಂಜಿಯಂತೆ ಚಿಮ್ಮುತ್ತಿದೆ. ಇಷ್ಟಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಂದಿನ ಕ್ರಮ ಕೈಗೊಳ್ಳದೆ, ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಹಮ್ಮಿಗಿ ಬ್ಯಾರೇಜ್ ನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಇಲ್ಲಿಂದ ನೀರು ಸರಬರಾಜು ಆಗುತ್ತದೆ.
ಗದಗ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ನೀರು ಪೋಲಾಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಪೈಪ್ ಒಡೆದು ನೀರು ಪೋಲಾಗುತ್ತಿದೆ. ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗುವುದು ಇದೇ ಪೈಪ್ ಮೂಲಕವಾಗಿದೆ.
ಪೈಪ್ ಒಡೆದು ನೀರಿನ ರಭಸಕ್ಕೆ ಕಾರಂಜಿಯಂತೆ ಚಿಮ್ಮುತ್ತಿದೆ. ಇಷ್ಟಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಂದಿನ ಕ್ರಮ ಕೈಗೊಳ್ಳದೆ, ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಹಮ್ಮಿಗಿ ಬ್ಯಾರೇಜ್ ನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಇಲ್ಲಿಂದ ನೀರು ಸರಬರಾಜು ಆಗುತ್ತದೆ.