ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಅಪಾರ ನೀರು ಪೋಲು

ಗದಗ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ನೀರು ಪೋಲಾಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಪೈಪ್‌ ಒಡೆದು ನೀರು ಪೋಲಾಗುತ್ತಿದೆ. ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗುವುದು ಇದೇ ಪೈಪ್​ ಮೂಲಕವಾಗಿದೆ. ಪೈಪ್ ಒಡೆದು ನೀರಿನ ರಭಸಕ್ಕೆ ಕಾರಂಜಿಯಂತೆ ಚಿಮ್ಮುತ್ತಿದೆ. ಇಷ್ಟಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಂದಿನ ಕ್ರಮ ಕೈಗೊಳ್ಳದೆ, ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಹಮ್ಮಿಗಿ ಬ್ಯಾರೇಜ್ ನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಇಲ್ಲಿಂದ ನೀರು ಸರಬರಾಜು ಆಗುತ್ತದೆ.

ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಅಪಾರ ನೀರು ಪೋಲು
ಸಾಧು ಶ್ರೀನಾಥ್​

Updated on: Oct 19, 2020 | 11:25 AM

ಗದಗ: ಕುಡಿಯುವ ನೀರಿನ ಪೈಪ್ ಒಡೆದು ಅಪಾರ ನೀರು ಪೋಲಾಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಪೈಪ್‌ ಒಡೆದು ನೀರು ಪೋಲಾಗುತ್ತಿದೆ.
ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಯಾಗುವುದು ಇದೇ ಪೈಪ್​ ಮೂಲಕವಾಗಿದೆ.

ಪೈಪ್ ಒಡೆದು ನೀರಿನ ರಭಸಕ್ಕೆ ಕಾರಂಜಿಯಂತೆ ಚಿಮ್ಮುತ್ತಿದೆ. ಇಷ್ಟಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಮುಂದಿನ ಕ್ರಮ ಕೈಗೊಳ್ಳದೆ, ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಹಮ್ಮಿಗಿ ಬ್ಯಾರೇಜ್ ನಿಂದ ಗದಗ-ಬೆಟಗೇರಿ ಅವಳಿ ನಗರಕ್ಕೆ ಇಲ್ಲಿಂದ ನೀರು ಸರಬರಾಜು ಆಗುತ್ತದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us