AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಮನನೊಂದ ನೇಕಾರ ಮಗ್ಗದ ಮುಂದೆಯೇ ಆತ್ಮಹತ್ಯೆಗೆ ಶರಣು, ಎಲ್ಲಿ?

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. […]

ಸಾಲಬಾಧೆ: ಮನನೊಂದ ನೇಕಾರ ಮಗ್ಗದ ಮುಂದೆಯೇ ಆತ್ಮಹತ್ಯೆಗೆ ಶರಣು, ಎಲ್ಲಿ?
ಆಯೇಷಾ ಬಾನು
| Edited By: |

Updated on: Oct 01, 2020 | 3:28 PM

Share

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ.

ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಸಂತೋಷ್​ಗೆ ಐದು ವರ್ಷದ ಗಂಡು ಮಗು ಹಾಗೂ ಮೂರು ವರ್ಷದ ಹೆಣ್ಣು ಮಗುವಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.