AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರನಿಗೆ ಕೊರೊನಾ ಸೋಂಕು, ಇಂದು ನಡೆಯಬೇಕಿದ್ದ ಮದುವೆ ರದ್ದು

ವಿಜಯಪುರ: ವರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆ ರದ್ದಾಗಿರುವ ಘಟನೆ ಇಂಡಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಇದೇ ಗ್ರಾಮದ ನಿವಾಸಿಯಾಗಿರುವ ವರ ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೊರೊನಾ ವಾರಿಯರ್ ಆಗಿ ಸೇವೆಯಲ್ಲಿದ್ದ ಕಾನ್ಸ್ ಟೇಬಲ್​ಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮದುವೆ ರದ್ದಾಗಿದೆ. ಮದುವೆಗಾಗಿ ರಜೆ ಪಡೆದು ಬೆಂಗಳೂರಿನಿಂದ ತನ್ನ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಕಾನ್ಸ್ ಟೇಬಲ್​ಗೆ ಕೊರೊನಾ ಲಕ್ಷಣ ಕಂಡು ಬಂದಿತ್ತು. ಕೂಡಲೆ ಆರೋಗ್ಯ ಇಲಾಖೆ […]

ವರನಿಗೆ ಕೊರೊನಾ ಸೋಂಕು, ಇಂದು ನಡೆಯಬೇಕಿದ್ದ ಮದುವೆ ರದ್ದು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 30, 2020 | 10:07 AM

Share

ವಿಜಯಪುರ: ವರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆ ರದ್ದಾಗಿರುವ ಘಟನೆ ಇಂಡಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಇದೇ ಗ್ರಾಮದ ನಿವಾಸಿಯಾಗಿರುವ ವರ ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೊರೊನಾ ವಾರಿಯರ್ ಆಗಿ ಸೇವೆಯಲ್ಲಿದ್ದ ಕಾನ್ಸ್ ಟೇಬಲ್​ಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮದುವೆ ರದ್ದಾಗಿದೆ.

ಮದುವೆಗಾಗಿ ರಜೆ ಪಡೆದು ಬೆಂಗಳೂರಿನಿಂದ ತನ್ನ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಕಾನ್ಸ್ ಟೇಬಲ್​ಗೆ ಕೊರೊನಾ ಲಕ್ಷಣ ಕಂಡು ಬಂದಿತ್ತು. ಕೂಡಲೆ ಆರೋಗ್ಯ ಇಲಾಖೆ ಸಿಬ್ಬಂದಿ ಗಂಟಲು ದ್ರವ ಕಲೆಕ್ಟ್ ಮಾಡಿ ಟೆಸ್ಟ್​ಗೆ ಕಳುಹಿಸಿದ್ದರು. ಮದುವೆಗೂ ಎರಡು ದಿನ ಮೊದಲೇ ಬಂದ ವರದಿಯಲ್ಲಿ ಪಾಸಿಟಿವ್ ಬಂದಿದೆ.

P12140 ಎಂಬ 26 ವರ್ಷದ ಪೊಲೀಸ್ ಕಾನ್ಸ್ ಟೇಬಲ್ ಎಂದು ಈತನನ್ನು ಗುರುತಿಸಲಾಗಿದೆ. ಜಿಲ್ಲಾಡಳಿತ ಮದುವೆ ನಡೆಸದಂತೆ ಸೂಚಿಸಿತ್ತು. ಹೀಗಾಗಿ ಕುಟುಂಬಸ್ಥರು ಮದುವೆಯನ್ನು ಮುಂದೂಡಿದ್ದಾರೆ. ಮದುವೆ ಗಂಡು ಈಗ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆತನ ಸಂಪರ್ಕಕ್ಕೆ ಬಂದವರು ಹಾಗೂ ಸಂಬಂಧಿಕರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತನ ಸಂಪರ್ಕಕ್ಕೆ ಬಂದ 30 ಜನರ ಗಂಟಲು ದ್ರವ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಿದೆ.

Published On - 10:05 am, Tue, 30 June 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ