AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope; ವಾರ ಭವಿಷ್ಯ | ಯಾವ ರಾಶಿಯವರಿಗೆ ಯಾವ ಫಲ? ಇಲ್ಲಿದೆ ಒಂದು ವಾರದ ಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

Horoscope; ವಾರ ಭವಿಷ್ಯ | ಯಾವ ರಾಶಿಯವರಿಗೆ ಯಾವ ಫಲ? ಇಲ್ಲಿದೆ ಒಂದು ವಾರದ ಭವಿಷ್ಯ
ವಾರ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Feb 22, 2021 | 11:51 AM

Share

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

ತಾ.22-02-2021 ರಿಂದ ತಾ 28-02-2021 ರವರೆಗೆ.. . ಮೇಷ: ಇಷ್ಟು ದಿನ ಕಾಡುತ್ತಿದ್ದ ಸಮಸ್ಯೆಗಳಿಗೆ ನಿಮ್ಮದೇ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಯೋಗ್ಯ ವ್ಯಕ್ತಿಗಳ ಜತೆ ವ್ಯವಹಾರ ಮಾಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಶುಭಸಂಖ್ಯೆ: 5

ವೃಷಭ: ನಿಮ್ಮ ಮಾತು, ವರ್ತನೆ ಹಿತಮಿತವಾಗಿದ್ದರೆ ಉತ್ತಮ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಬಹಳ ದಿನಗಳ ನಂತರ ದೂರ ಪ್ರಯಾಣ ಮಾಡಲಿದ್ದೀರಿ. ಶುಭಸಂಖ್ಯೆ: 3

ಮಿಥುನ: ಅನಿವಾರ್ಯವಾಗಿ ದೂರ ಪ್ರಯಾಣವನ್ನು ಅರ್ಧಕ್ಕೇ ಸ್ಥಗಿತಗೊಳಿಸುವಿರಿ. ವಾಹನ ಚಾಲಕರು ಚಾಲನೆಯಲ್ಲಿ ಎಚ್ಚರಿಕೆಯಿಂದಿರುವುದು ಉತ್ತಮ. ಎಷ್ಟೋ ದಿನದಿಂದ ಕಾಡುತ್ತಿದ್ದ ಚಿಂತೆಗಳಿಗೆ ಪರಿಹಾರ ಕಂಡುಕೊಳ‍್ಳಲು ಯತ್ನಿಸುವಿರಿ. ಶುಭಸಂಖ್ಯೆ: 5

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮೇಲಧಿಕಾರಿಗಳಿಗೆ ಸಂತೋಷವುಂಟು ಮಾಡುವ ಕೆಲಸ ಮಾಡಲಿದ್ದೀರಿ. ಕೆಳಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ಶುಭಸಂಖ್ಯೆ: 7

ಸಿಂಹ: ಉದ್ಯೋಗ ರಂಗದಲ್ಲಿ ನಿಧಾನಗತಿಯ ಪ್ರಗತಿ ಕಂಡುಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಏಳಿಗೆ ಕಂಡುಬರಲಿದೆ. ಚಿಂತೆ ಬೇಡ. ಶುಭಸಂಖ್ಯೆ: 9

ಕನ್ಯಾ: ಬೇರೆಯವರ ಸಲಹೆಯಂತೆ ನಿರ್ಧಾರ ಕೈಗೊಳ್ಳಲು ಹೋದರೆ ಕೈಸುಟ್ಟುಕೊಳ್ಳುವ ಸಂಭವವೇ ಹೆಚ್ಚು. ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಮನಸ್ಸಿಗೆ ಇಷ್ಟವಾದ ವ್ಯಕ್ತಿಗಳೊಂದಿಗೆ ಸುಮಧುರ ಕ್ಷಣ ಕಳೆಯಲಿದ್ದೀರಿ. ಶುಭಸಂಖ್ಯೆ: 2

ತುಲಾ: ಇಷ್ಟವಸ್ತುಗಳ ಖರೀದಿ, ಭೋಜನ ಯೋಗವಿದೆ. ಮಿತ್ರರೊಂದಿಗೆ ಪ್ರವಾಸ ಕೈಗೊಳ್ಳಲಿದ್ದೀರಿ. ಹಣಕಾಸಿನ ಪರಿಸ್ಥಿತಿ ಸುಧಾರಣೆಯಾದೀತು. ನೂತನ ಗೃಹ ನಿರ್ಮಾಣ ಕೆಲಸಕ್ಕೆ ಚಾಲನೆ ನೀಡಲು ಇದು ಸರಿಯಾದ ಸಮಯ. ದೇವತಾ ಪ್ರಾರ್ಥನೆ ಮರೆಯದಿರಿ. ಶುಭಸಂಖ್ಯೆ: 2

ವೃಶ್ಚಿಕ: ಬೇರೆಯವರು ಏನಂದುಕೊಳ್ಳುವರೋ ಎಂಬ ಹಿಂಜರಿಕೆಯಲ್ಲಿ ನಿಮ್ಮ ನಿರ್ಧಾರಗಳನ್ನು ಹೊರ ಹಾಕಲು ಹಿಂದೇಟು ಹಾಕುವಿರಿ. ನಿಮ್ಮ ಕಷ್ಟಗಳಿಗೆ ಸಂಗಾತಿಯ ಸಾಂತ್ವನ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ. ಶುಭಸಂಖ್ಯೆ: 6

ಧನು: ಮನಸ್ಸಿಗೆ ಇಷ್ಟವಾದವರ ಜತೆ ನಿಮ್ಮ ಮನದಾಳ ಹಂಚಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರು ನಿಮ್ಮ ಕಷ್ಟಕ್ಕೆ ಜತೆಯಾಗಲಿದ್ದಾರೆ. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನವಾದೀತು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ. ಶುಭಸಂಖ್ಯೆ: 8

ಮಕರ: ಇಷ್ಟು ದಿನ ವಿಘ‍್ನಗಳಿಂದಾಗಿ ಅರ್ಧಕ್ಕೇ ನಿಂತ ಕೆಲಸಗಳಿಗೆ ಇಂದು ಚಾಲನೆ ನೀಡಲಿದ್ದೀರಿ. ನಿಮ್ಮ ವಿಶ್ವಾಸದ ವಂಚನೆ ಮಾಡುವವರಿರುತ್ತಾರೆ. ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭಸಂಖ್ಯೆ: 7

ಕುಂಭ: ಬೇರೆಯವರಿಗೆ ಒಳಿತನ್ನೇ ಬಯಸುವ ನಿಮ್ಮ ಗುಣ ನಿಮಗೆ ಒಳ್ಳೆಯದನ್ನೇ ಮಾಡಲಿದೆ. ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಶುಭಸಂಖ್ಯೆ: 4

ಮೀನ: ಇಷ್ಟು ದಿನ ಕಳೆದುಕೊಂಡಿದ್ದ ನೆಮ್ಮದಿ, ಪ್ರೀತಿ ಕ್ರಮೇಣ ನಿಮ್ಮ ಪಾಲಿಗೆ ಬಂದೊರಗಲಿದೆ. ಆರ್ಥಿಕವಾಗಿ ಆದಾಯ ವೃದ್ಧಿಯಾಗಲಿದೆ. ಬಹಳ ದಿನಗಳ ನಂತರ ಬಂಧು ವರ್ಗದವರ ಭೇಟಿಯಾಗಿ ಮನಸ್ಸಿಗೆ ಸಂತಸವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ. ಶುಭಸಂಖ್ಯೆ: 8

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 8:40 pm, Sun, 21 February 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್