
ಚಿಕ್ಕಮಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆಂಪನಹಳ್ಳಿ ಬಡಾವಣೆಯಲ್ಲಿ ನಡೆದಿದೆ. ರಂಜಿತಾ (23) ನೇಣಿಗೆ ಶರಣಾದ ಗೃಹಿಣಿ.
ಅರುಣ್ ಕುಮಾರ್ ವಿಷ ಕುಡಿದಿದ್ದೇನೆಂದು ಶಿವಮೊಗ್ಗ ಆಸ್ಪತ್ರೆಗೆ ಸೇರಿದ್ದಾನೆ. ಪತಿ ಕಿರುಕುಳದಿಂದ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪ ಮಾಡಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.