AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 17, 2020 | 7:27 PM

Share

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು