
ದಾವಣಗೆರೆ: ವಾಯುವಿಹಾರಕ್ಕೆ ತೆರಳಿದ್ದ ದಂಪತಿಗೆ ಕಾಡಾನೆ ತಿವಿದಿರುವ ಘಟನೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶೈಲೇಂದ್ರ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ಇದೇ ಕಾಡಾನೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ತಿಪ್ಪೇಸ್ವಾಮಿ ಗೆ ತಿವಿದಿತ್ತು.
ಈ ಕಾಡಾನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವನ್ಯಜೀವಿಧಾಮದಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈಗ ದಾವಣಗೆರೆ ತಾಲೂಕಿನ ಮಾಯಕೊಂಡ ಮಾರ್ಗವಾಗಿ ಚಿತ್ರದುರ್ಗ ಜಿಲ್ಲೆಗೆ ಹೋಗಿರುವ ಅನುಮಾನ ವ್ಯಕ್ತವಾಗಿದ್ದು, ಚನ್ನಗಿರಿ ವಲಯ ಅರಣ್ಯಾಧಿಕಾರಿಗಳ ನೇತ್ರತ್ವದಲ್ಲಿ ಕಾಡಾನೆಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
Published On - 11:40 am, Thu, 13 February 20