ಚಾಮರಾಜನಗರ: ಕಾಡಾನೆ ತುಳಿದು ಹೊಂಗಲವಾಡಿ ಗ್ರಾಮದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಈ ದುರ್ಘಟನೆ ನಡೆದಿದೆ.
ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದ ಗುರುಸ್ವಾಮಿ(61) ಮೃತರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಸ್ಥಳೀಯರು ಆಗ್ರಹಿಸಿದ್ದಾರೆ.
ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ ಅರಣ್ಯದೊಳಕ್ಕೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುರುಸ್ವಾಮಿ ಬುಧವಾರ ರಾತ್ರಿ ಮನೆಗೆ ಬಾರದೇ ಇದ್ದಾಗ ಬೆಳಗ್ಗೆ ಹುಡುಕಾಟ ನಡೆಸಿದ್ದಾರೆ. ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ ಯಾಗುದೆ.