AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧೆಡೆ ಮುಂದುವರಿದ ಕಾಡಾನೆ ಉಪಟಳ: ರೈತರ ಬೆಳೆ ಹಾನಿ

ಮಡಿಕೇರಿ: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಕಾಡಾನೆಗಳು ತಮ್ಮ ಹಾವಳಿಯನ್ನು ಮುಂದುವರಿಸಿವೆ. ರೈತರ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟದಲ್ಲಿನ ಬೆಳೆಗಳನ್ನು ನಾಶಪಡಿಸಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದ ತೋಟಗಳಲ್ಲೇ ಕಾಡಾನೆ ಬೀಡು ಬಿಟ್ಟಿದ್ದು, ಕಾಡಾನೆ ಹಾವಳಿಗೆ ಕಟ್ಟೆಪುರ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ. ಹಗಲು ರಾತ್ರಿ ಎನ್ನದೆ ಜನವಸತಿ ಪ್ರದೇಶದಲ್ಲಿ ಆನೆ ವಾಕ್ ಮಾಡುತ್ತಿದ್ದು, ಕಾಡಾನೆ ವಾಕಿಂಗ್‌ಗೆ ಗ್ರಾಮದ ಜನತೆ ಹೈರಾಣಾಗಿದ್ದಾರೆ. ಮೂರು ತಿಂಗಳಾದರೂ ಇತ್ತ ಬರದ […]

ರಾಜ್ಯದ ವಿವಿಧೆಡೆ ಮುಂದುವರಿದ ಕಾಡಾನೆ ಉಪಟಳ: ರೈತರ ಬೆಳೆ ಹಾನಿ
ಸಾಧು ಶ್ರೀನಾಥ್​
|

Updated on: Mar 02, 2020 | 12:46 PM

Share

ಮಡಿಕೇರಿ: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಕಾಡಾನೆಗಳು ತಮ್ಮ ಹಾವಳಿಯನ್ನು ಮುಂದುವರಿಸಿವೆ. ರೈತರ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿವೆ. ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟದಲ್ಲಿನ ಬೆಳೆಗಳನ್ನು ನಾಶಪಡಿಸಿದೆ. ಕಳೆದ ಮೂರು ತಿಂಗಳಿನಿಂದ ಗ್ರಾಮದ ತೋಟಗಳಲ್ಲೇ ಕಾಡಾನೆ ಬೀಡು ಬಿಟ್ಟಿದ್ದು, ಕಾಡಾನೆ ಹಾವಳಿಗೆ ಕಟ್ಟೆಪುರ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ.

ಹಗಲು ರಾತ್ರಿ ಎನ್ನದೆ ಜನವಸತಿ ಪ್ರದೇಶದಲ್ಲಿ ಆನೆ ವಾಕ್ ಮಾಡುತ್ತಿದ್ದು, ಕಾಡಾನೆ ವಾಕಿಂಗ್‌ಗೆ ಗ್ರಾಮದ ಜನತೆ ಹೈರಾಣಾಗಿದ್ದಾರೆ. ಮೂರು ತಿಂಗಳಾದರೂ ಇತ್ತ ಬರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡಿಯಲ್ಲೂ ಮುಂದುವರಿದ ಕಾಡಾನೆಗಳ ಹಾವಳಿ: ಕೋಲಾರ: ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಮಾಲೂರು ತಾಲೂಕಿನ ಎಳೇಸಂದ್ರ ಗ್ರಾಮದ ಬಳಿ ರೈತರ ಬೆಳೆ ನಾಶಪಡಿಸಿವೆ. ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ದಾಳಿ ನಡೆಸಿ 2 ಎಕರೆಯಲ್ಲಿ ಬೆಳೆದಿದ್ದ ವಿವಿಧ ಬೆಳೆಗಳನ್ನು ನಾಶಪಡಿಸಿವೆ. ಕಾಡಾನೆಗಳ ದಾಳಿಯಿಂದ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರು, ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡು ಭಾಗದಲ್ಲೂ ಒಂಟಿ ಸಲಗ ಉಪಟಳ: ಹಾಸನ: ಮಲೆನಾಡು ಭಾಗದಲ್ಲೂ ಕಾಡಾನೆ ಉಪಟಳ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಹೆಗ್ಗೋವೆ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಹಾಕಿದ್ದ ಶೀಟ್​ಗಳನ್ನೇ ಒಂಟಿ ಸಲಗ ಧ್ವಂಸಗೊಳಿಸಿದೆ. ಪ್ರತಿನಿತ್ಯ ಮನೆಯ ಆವರಣಕ್ಕೆ ಬಂದು ಕಾಡಾನೆಗಳು ಆತಂಕ ಸೃಷ್ಟಿಸುತ್ತಿವೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಆನೆ ದಾಳಿಯ ಸಮಸ್ಯೆ ಪರಿಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ