ವಿಲ್ಸನ್ ಗಾರ್ಡನ್ ಇನ್ಸ್‌ಪೆಕ್ಟರ್ ಕೊರೊನಾಗೆ ಬಲಿ; ನಿವೃತ್ತಿಗೆ ಎರಡೇ ತಿಂಗಳಿತ್ತು
ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಪೊಲೀಸ್ ಇನ್ಸ್‌ಪೆಕ್ಟರೊಬ್ಬರು ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಇನ್ಸ್‌ಪೆಕ್ಟರ್ ಮೀರ್ ಗೌಸ್ ಅವರು ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಅಂಗಾಗ ಸಮಸ್ಯೆಯಿಂದಲೂ ಬಳಲುತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ನಿವೃತ್ತಿಯಾಗಲು ಕೇವಲ 2 ತಿಂಗಳು ಬಾಕಿ ಇತ್ತು. ಇನ್ಸ್‌ಪೆಕ್ಟರ್ ಮೀರ್ ಗೌಸ್ ಸಾವಿಗೆ ಕಂಬನಿ ಮಿಡಿದಿರುವ ವಿಲ್ಸನ್ […]
ಪ್ರಾತಿನಿಧಿಕ ಚಿತ್ರ
ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಪೊಲೀಸ್ ಇನ್ಸ್‌ಪೆಕ್ಟರೊಬ್ಬರು ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಇನ್ಸ್‌ಪೆಕ್ಟರ್ ಮೀರ್ ಗೌಸ್ ಅವರು ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಅಂಗಾಗ ಸಮಸ್ಯೆಯಿಂದಲೂ ಬಳಲುತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ನಿವೃತ್ತಿಯಾಗಲು ಕೇವಲ 2 ತಿಂಗಳು ಬಾಕಿ ಇತ್ತು. ಇನ್ಸ್‌ಪೆಕ್ಟರ್ ಮೀರ್ ಗೌಸ್ ಸಾವಿಗೆ ಕಂಬನಿ ಮಿಡಿದಿರುವ ವಿಲ್ಸನ್ ಗಾರ್ಡನ್ ಠಾಣೆ ಸಿಬ್ಬಂದಿ ಅತೀವ ಶೋಕ ವ್ಯಕ್ತಪಡಿಸಿದ್ದಾರೆ.