ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿ
ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ. ರಕ್ಷಣೆಗೆ ನಿಂತ ಕೊರೊನಾ ವಾರಿಯರ್ಸ್ಗಳ ಬೆನ್ನಿಗೆ ಬಿದ್ದಿದೆ. ಕೊರೊನಾಗೆ ನಗರದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಟ್ರಾಫಿಕ್ ಠಾಣೆ ASI ಕೊವಿಡ್ 19ಗೆ ಮೃತಪಟ್ಟಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಎಎಸ್ಐ ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೊರೊನಾ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ASI ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ. ರಕ್ಷಣೆಗೆ ನಿಂತ ಕೊರೊನಾ ವಾರಿಯರ್ಸ್ಗಳ ಬೆನ್ನಿಗೆ ಬಿದ್ದಿದೆ. ಕೊರೊನಾಗೆ ನಗರದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಟ್ರಾಫಿಕ್ ಠಾಣೆ ASI ಕೊವಿಡ್ 19ಗೆ ಮೃತಪಟ್ಟಿದ್ದಾರೆ.
ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಎಎಸ್ಐ ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೊರೊನಾ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ASI ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Published On - 9:25 am, Sun, 21 June 20