ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ, ಎಮ್ಮೆ ಸಾವು
ರಾಯಚೂರು: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಬೆನಕಲ್ ಗ್ರಾಮದಲ್ಲಿ ನಡೆದಿದೆ. ಮಲ್ಲಮ್ಮ(35) ಮೃತ ದುರ್ದೈವಿ. ಅಕ್ರಮವಾಗಿ ಜಮೀನಿನಲ್ಲಿ ವಿದ್ಯುತ್ ತಂತಿ ಹಾಕಲಾಗಿತ್ತು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮಲ್ಲಮ್ಮ ಮೃತಪಟ್ಟಿದ್ದಾರೆ. ಜೊತೆಗೆ ಎಮ್ಮೆ ಸಹ ಸಾವನ್ನಪ್ಪಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಮೀನು ರಕ್ಷಣೆಗೆ ಎಂದು ಹಾಕಿದ್ದ ವಿದ್ಯುತ್ ತಂತಿ ಜೀವಕ್ಕೆಯೇ ಕುತ್ತು ತಂದಿದೆ.

ರಾಯಚೂರು: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಬೆನಕಲ್ ಗ್ರಾಮದಲ್ಲಿ ನಡೆದಿದೆ. ಮಲ್ಲಮ್ಮ(35) ಮೃತ ದುರ್ದೈವಿ.
ಅಕ್ರಮವಾಗಿ ಜಮೀನಿನಲ್ಲಿ ವಿದ್ಯುತ್ ತಂತಿ ಹಾಕಲಾಗಿತ್ತು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮಲ್ಲಮ್ಮ ಮೃತಪಟ್ಟಿದ್ದಾರೆ. ಜೊತೆಗೆ ಎಮ್ಮೆ ಸಹ ಸಾವನ್ನಪ್ಪಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಮೀನು ರಕ್ಷಣೆಗೆ ಎಂದು ಹಾಕಿದ್ದ ವಿದ್ಯುತ್ ತಂತಿ ಜೀವಕ್ಕೆಯೇ ಕುತ್ತು ತಂದಿದೆ.
Published On - 7:08 am, Tue, 6 October 20




