ವಿದ್ಯುತ್ ಸ್ಪರ್ಶ: ತಡರಾತ್ರಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಸಾವು
ಮೈಸೂರು: ತಡರಾತ್ರಿ ತಮ್ಮ ಜಮೀನಿಗೆ ಹೋಗುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಉಸ್ಕೂರು ಗ್ರಾಮದಲ್ಲಿ ನಡೆದಿದೆ. ಉಸ್ಕೂರು ಗ್ರಾಮದ ಗೌರಮ್ಮ(54) ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಮ್ಮ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯ ನಂತರ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಂತಿಗಳು ತುಂಡರಿಸುವ ಸ್ಥಿತಿಯಲ್ಲಿದ್ದಾಗ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳಿಗೆ ತಂತಿಗಳನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. […]

ಮೈಸೂರು: ತಡರಾತ್ರಿ ತಮ್ಮ ಜಮೀನಿಗೆ ಹೋಗುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಉಸ್ಕೂರು ಗ್ರಾಮದಲ್ಲಿ ನಡೆದಿದೆ.
ಉಸ್ಕೂರು ಗ್ರಾಮದ ಗೌರಮ್ಮ(54) ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಮ್ಮ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯ ನಂತರ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ತಂತಿಗಳು ತುಂಡರಿಸುವ ಸ್ಥಿತಿಯಲ್ಲಿದ್ದಾಗ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳಿಗೆ ತಂತಿಗಳನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳದ ಚೆಸ್ಕಾಂ ಅಧಿಕಾರಿಗಳು ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಜೊತೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Published On - 8:41 am, Sat, 7 November 20