
ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮಹಿಳೆಯ ದೇಹ ಛಿದ್ರ ಛಿದ್ರವಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. 40 ವರ್ಷದ ಗಂಗಮ್ಮ ಸಂಶಿ ಮೃತ ಮಹಿಳೆ. ಬೈಕ್ನಲ್ಲಿದ್ದ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದ, ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.