AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಂಥಾ ಕ್ರೌರ್ಯ ? ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆ ಗೇಟ್ ಬಳಿಯೇ ಪ್ರಾಣ ಬಿಟ್ಟ ಮಹಿಳೆ

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯರ ಅಮಾನವೀಯ ವರ್ತನೆಗೆ ಮತ್ತೊಂದು ಬಲಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಬಳಿಯೇ ಮಹಿಳೆಯೊಬ್ಬಳು ನರಳಿ ನರಳಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬೆಂಗಳೂರಿನ 60 ವರ್ಷದ ಮಹಿಳೆಯೊಬ್ಬಳು ಉಸಿರಾಟದ ತೊಂದರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಬೆಡ್ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ದಾಖಲಿಸಿಕೊಂಡಿಲ್ಲ. ಪರಿಣಾಮ ಆಸ್ಪತ್ರೆ ಗೇಟ್ ಬಳಿಯೇ ನರಳುತ್ತಿದ್ದ ಮಹಿಳೆ ಚಿಕಿತ್ಸೆ ಸಿಗದೆ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಆಘಾತಕಾರಿಯಂದ್ರೆ ಬದುಕಿದ್ದಾಗ […]

ಇದೆಂಥಾ ಕ್ರೌರ್ಯ ? ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆ ಗೇಟ್ ಬಳಿಯೇ ಪ್ರಾಣ ಬಿಟ್ಟ ಮಹಿಳೆ
Guru
Guru| Edited By: |

Updated on:Jul 12, 2020 | 2:02 PM

Share

ಬೆಂಗಳೂರು: ಬೆಂಗಳೂರಿನಲ್ಲಿ ವೈದ್ಯರ ಅಮಾನವೀಯ ವರ್ತನೆಗೆ ಮತ್ತೊಂದು ಬಲಿಯಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಬಳಿಯೇ ಮಹಿಳೆಯೊಬ್ಬಳು ನರಳಿ ನರಳಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಬೆಂಗಳೂರಿನ 60 ವರ್ಷದ ಮಹಿಳೆಯೊಬ್ಬಳು ಉಸಿರಾಟದ ತೊಂದರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಬೆಡ್ ಇಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನ ದಾಖಲಿಸಿಕೊಂಡಿಲ್ಲ. ಪರಿಣಾಮ ಆಸ್ಪತ್ರೆ ಗೇಟ್ ಬಳಿಯೇ ನರಳುತ್ತಿದ್ದ ಮಹಿಳೆ ಚಿಕಿತ್ಸೆ ಸಿಗದೆ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ.

ಆಘಾತಕಾರಿಯಂದ್ರೆ ಬದುಕಿದ್ದಾಗ ಚಿಕಿತ್ಸೆ ನೀಡದೆ ಆಸ್ಪತ್ರೆ ಒಳಗೂ ಬಿಟ್ಟುಕೊಳ್ಳದೆ ಇದ್ದ ವೈದ್ಯಕೀಯ ಸಿಬ್ಬಂದಿ, ಮಹಿಳೆ ಸತ್ತ ಮೇಲೆ ಆಕೆಯ ಶವವನ್ನ ಪಡೆದು ಕೋವಿಡ್ ಟೆಸ್ಟ್‌ಗೆ ರವಾನಿಸಿದ್ದಾರೆ.

ಇದಕ್ಕೂ ಮೊದಲು ಮಹಿಳೆ ಉಸಿರಾಟದ ತೊಂದರೆಯಂದು ಖಾಸಗಿ ಆಸ್ಪತ್ರೆಗೆ ಚೆಕ್ ಅಪ್​ಗಾಗಿ ಹೋದಾಗ ಕೋವಿಡ್ ಶಂಕೆ ಕಂಡು ಬಂದಿತ್ತು. ಆಗ ಖಾಸಗಿ ಆಸ್ಪತ್ರೆ ವೈದ್ಯರು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಎಂದು ಕಳಿಸಿದ್ರು. ಮಹಿಳೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆ, ಕಿಮ್ಸ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗೆ ಹೋದರೂ ಬೆಡ್ ಇಲ್ಲ ,ವೆಂಟಿಲೇಟರ್ ಇಲ್ಲ ಎಂದು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿವೆ.

ಬೆಳಗಿನ ಜಾವ 2 ಗಂಟೆಯಿಂದ ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗಾಗಿ ಅಲೆಯುತ್ತಿದ್ದ ಮಹಿಳೆ ಕೊನೆಗೆ ಚಿಕಿತ್ಸೆ ಸಿಗದೆ ವಿಕ್ಟೋರಿಯಾ ಆಸ್ಪತ್ರೆಯ ಗೇಟ್ ಮುಂದೆ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.

Published On - 10:35 am, Sun, 12 July 20

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ