ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ, ವರದಕ್ಷಿಣೆ ಕಿರುಕುಳ ಆರೋಪ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಇರೋಡಿ ತಾಂಡಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಮೃತರ ಸಂಬಂಧಿಕರು ವರದಕ್ಷಿಣೆ ಕಿರುಕಳ ನೀಡಿ ಕೊಲೆ ಮಾಡಿರುವ ಶಂಕೆ ವ್ಯಕ್ತ ಪಡಿಸುತ್ತಿದ್ದಾರೆ. ಶಿಲ್ಪಾ (22) ಸಾವನ್ನಪ್ಪಿದ ಮೂರು ತಿಂಗಳ ಗರ್ಭಿಣಿ ಮಹಿಳೆಯಾಗಿದ್ದು. ಕಳೆದ ನಾಲ್ಕು ತಿಂಗಳ ಹಿಂದೆ ದೀಪಕ್ ಎಂಬ ಯುವಕನನ್ನು ಮದುವೆ ಆಗಿದ್ದಳು. ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವುದರಿಂದ ಪತಿ ದೀಪಕ್ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ […]

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ, ವರದಕ್ಷಿಣೆ ಕಿರುಕುಳ ಆರೋಪ

Updated on: Sep 14, 2020 | 11:22 AM

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಇರೋಡಿ ತಾಂಡಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಮೃತರ ಸಂಬಂಧಿಕರು ವರದಕ್ಷಿಣೆ ಕಿರುಕಳ ನೀಡಿ ಕೊಲೆ ಮಾಡಿರುವ ಶಂಕೆ ವ್ಯಕ್ತ ಪಡಿಸುತ್ತಿದ್ದಾರೆ.

ಶಿಲ್ಪಾ (22) ಸಾವನ್ನಪ್ಪಿದ ಮೂರು ತಿಂಗಳ ಗರ್ಭಿಣಿ ಮಹಿಳೆಯಾಗಿದ್ದು. ಕಳೆದ ನಾಲ್ಕು ತಿಂಗಳ ಹಿಂದೆ ದೀಪಕ್ ಎಂಬ ಯುವಕನನ್ನು ಮದುವೆ ಆಗಿದ್ದಳು. ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವುದರಿಂದ ಪತಿ ದೀಪಕ್ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಶಿಲ್ಪಾ ಮನೆಯವರು ಆರೋಪ ಮಾಡುತ್ತಿದ್ದಾರೆ.

ಘಟನೆಯ ನಂತರ ಪತಿ ದೀಪಕ್ (26) ಹಾಗೂ ಅವರ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದು, ಗೃಹಿಣಿ ಕುಟುಂಬಸ್ಥರಿಂದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೀಪಕ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ FIR ದಾಖಲಿಸಲಾಗಿದೆ.