AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳ ಉದಾಸೀನ: ರಸ್ತೆಯಲ್ಲಿ.. ಕಾರಿನಲ್ಲೇ ಮಗುವಿಗೆ ಜನ್ಮ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಬೆಳಕಿಗೆ ಬಂದಿದೆ. ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದಕ್ಕೆ ತುಂಬು ಗರ್ಭಿಣಿ ನಡು ರಸ್ತೆಯಲ್ಲಿ  ಕಾರ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಅನುಸೂಯ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆ ಹೆರಿಗೆ ವಾರ್ಡ್​ನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆ ಸೀಲ್​ಡೌನ್ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಗರ್ಭಿಣಿ […]

ಆಸ್ಪತ್ರೆಗಳ ಉದಾಸೀನ: ರಸ್ತೆಯಲ್ಲಿ.. ಕಾರಿನಲ್ಲೇ ಮಗುವಿಗೆ ಜನ್ಮ
ಆಯೇಷಾ ಬಾನು
| Edited By: |

Updated on:Jul 20, 2020 | 2:31 PM

Share

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಬೆಳಕಿಗೆ ಬಂದಿದೆ. ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದಕ್ಕೆ ತುಂಬು ಗರ್ಭಿಣಿ ನಡು ರಸ್ತೆಯಲ್ಲಿ  ಕಾರ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

ಅನುಸೂಯ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆ ಹೆರಿಗೆ ವಾರ್ಡ್​ನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆ ಸೀಲ್​ಡೌನ್ ಮಾಡಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಗರ್ಭಿಣಿ ಕುಟುಂಬ ಖಾಸಗಿ ಆಸ್ಪತ್ರೆ ಬಾಗಿಲು ತಟ್ಟಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಯವರು ಕೊರೊನಾ ಪರೀಕ್ಷೆ ಬಳಿಕ ಚಿಕಿತ್ಸೆ ನೀಡುವುದಾಗಿ ಷರತ್ತು ಹಾಕಿದ್ದಾರೆ. ಅನಸೂಯರನ್ನು ಕಾರಿಯಲ್ಲಿ ಶಿವಮೊಗ್ಗಕ್ಕೆ ಕರೆದುಕೊಂಡು ಬರುವಾಗ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕ್ ಬಳಿ ವಾಹನದಲ್ಲೇ ಹೆರಿಗೆಯಾಗಿದೆ. ಹೆಣ್ಣು ಮಗುವಿಗೆ ತಾಯಿ ಜನ್ಮ ನೀಡಿದ್ದಾಳೆ. ಹೆರಿಗೆ ಬಳಿಕ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಬಾಣಂತಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 2:30 pm, Mon, 20 July 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​