
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಬೆಳಕಿಗೆ ಬಂದಿದೆ. ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದಕ್ಕೆ ತುಂಬು ಗರ್ಭಿಣಿ ನಡು ರಸ್ತೆಯಲ್ಲಿ ಕಾರ್ನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಅನುಸೂಯ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆ ಹೆರಿಗೆ ವಾರ್ಡ್ನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆ ಸೀಲ್ಡೌನ್ ಮಾಡಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಗರ್ಭಿಣಿ ಕುಟುಂಬ ಖಾಸಗಿ ಆಸ್ಪತ್ರೆ ಬಾಗಿಲು ತಟ್ಟಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಯವರು ಕೊರೊನಾ ಪರೀಕ್ಷೆ ಬಳಿಕ ಚಿಕಿತ್ಸೆ ನೀಡುವುದಾಗಿ ಷರತ್ತು ಹಾಕಿದ್ದಾರೆ. ಅನಸೂಯರನ್ನು ಕಾರಿಯಲ್ಲಿ ಶಿವಮೊಗ್ಗಕ್ಕೆ ಕರೆದುಕೊಂಡು ಬರುವಾಗ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕ್ ಬಳಿ ವಾಹನದಲ್ಲೇ ಹೆರಿಗೆಯಾಗಿದೆ. ಹೆಣ್ಣು ಮಗುವಿಗೆ ತಾಯಿ ಜನ್ಮ ನೀಡಿದ್ದಾಳೆ. ಹೆರಿಗೆ ಬಳಿಕ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಬಾಣಂತಿ ಚಿಕಿತ್ಸೆ ನೀಡಲಾಗುತ್ತಿದೆ.
Published On - 2:30 pm, Mon, 20 July 20