ಕೌಟುಂಬಿಕ ಕಲಹ: ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

|

Updated on: Sep 05, 2020 | 9:42 AM

ಬಾಗಲಕೋಟೆ: ಕೌಟುಂಬಿಕ ಕಲಹದಿಂದಾಗಿ ಬೇಸತ್ತ ಮಹಿಳೆಯೊಬ್ಬರು ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದ ಸಂಗಮ್ಮ ಪಾಟಿಲ್ (44) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಮಹಿಳೆಯ ಸಾವಿಗೆ ಕೌಟುಂಬಿಕ ಕಲಹವೇ ಕಾರಣವೆಂಬುದು ತಿಳಿದುಬಂದಿದೆ. ಬಾದಾಮಿ ಅಗ್ನಿಶಾಮಕದಳದ ಸಿಬ್ಬಂದಿಗಳು ಅಹಸ್ತ್ಯತೀರ್ಥ ಹೊಂಡದಲ್ಲಿ ಕಾರ್ಯಾಚರಣೆ ನಡೆಸಿ ಮಹಿಳೆಯ ಮೃತ ದೇಹವನ್ನು ಹೊಂಡದಿಂದ ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಬಾದಾಮಿ ಪೊಲೀಸರು ಮೃತ […]

ಕೌಟುಂಬಿಕ ಕಲಹ:  ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ
Follow us on

ಬಾಗಲಕೋಟೆ: ಕೌಟುಂಬಿಕ ಕಲಹದಿಂದಾಗಿ ಬೇಸತ್ತ ಮಹಿಳೆಯೊಬ್ಬರು ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದ ಸಂಗಮ್ಮ ಪಾಟಿಲ್ (44) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಮಹಿಳೆಯ ಸಾವಿಗೆ ಕೌಟುಂಬಿಕ ಕಲಹವೇ ಕಾರಣವೆಂಬುದು ತಿಳಿದುಬಂದಿದೆ. ಬಾದಾಮಿ ಅಗ್ನಿಶಾಮಕದಳದ ಸಿಬ್ಬಂದಿಗಳು ಅಹಸ್ತ್ಯತೀರ್ಥ ಹೊಂಡದಲ್ಲಿ ಕಾರ್ಯಾಚರಣೆ ನಡೆಸಿ ಮಹಿಳೆಯ ಮೃತ ದೇಹವನ್ನು ಹೊಂಡದಿಂದ ಹೊರ ತೆಗೆದಿದ್ದಾರೆ.

ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಬಾದಾಮಿ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.