
ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿಶಿರೂರು ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಹುಸೇನಬಿ(38) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಇನ್ನು ಅಪಘಾತದಲ್ಲಿ ರಾಜೇಸಾಬ್ ಮತ್ತು ಅಯಾನ್ ಎಂಬುವವರಿಗೆ ಗಾಯಾಗಳಾಗಿದ್ದು ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ. ಕಾರ್ನಲ್ಲಿದ್ದವರು ಜಿಲ್ಲೆಯ ಕೊಟುಮಚಗಿ ಗ್ರಾಮದಿಂದ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ.