ಹಸುಗೂಸನ್ನ ನೀರಿನಲ್ಲಿ ಮುಳುಗಿಸಿ ಮಹಿಳೆ ನೇಣಿಗೆ ಶರಣು, ಎಲ್ಲಿ?
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಒಬ್ಬ ಮಹಿಳೆ ತನ್ನ ಹಸುಗೂಸನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋನಪೂರ ಪೇಟೆಯ 7ನೇ ವಾರ್ಡನಲ್ಲಿ ಈ ಘಟನೆ ಸಂಭವಿಸಿದ್ದು, ಹರನಹಳ್ಳಿ ಜಾನಕಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ. ಮೃತ ಜಾನಕಿ ತನ್ನ ಐದು ವರ್ಷದ ಮಗು ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಕೊಂದು, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ […]
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಒಬ್ಬ ಮಹಿಳೆ ತನ್ನ ಹಸುಗೂಸನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋನಪೂರ ಪೇಟೆಯ 7ನೇ ವಾರ್ಡನಲ್ಲಿ ಈ ಘಟನೆ ಸಂಭವಿಸಿದ್ದು, ಹರನಹಳ್ಳಿ ಜಾನಕಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ.
ಮೃತ ಜಾನಕಿ ತನ್ನ ಐದು ವರ್ಷದ ಮಗು ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಕೊಂದು, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಮನಕುಲಕುವ ಘಟನೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದೆಂದು ಶಂಕಿಸಲಾಗಿದೆ. ಸದ್ಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.