ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ

ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಬಳಿ ಮಹಿಳೆಯೊಬ್ಬಳನ್ನು ಹತ್ಯೆಗೈದು ನಂತರ ಅವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಹಣಕಾಸು ವಹಿವಾಟು ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸುರತ್ಕಲ್ ಬಳಿಯ ಮುಕ್ಕದ ಬಾಡಿಗೆ ಮನೆಯಲ್ಲಿ ಕೃತ್ಯ ‌ನಡೆದಿದೆ. ರೇಖಾ ಭಂಡಾರಿ(36) ಎಂಬುವವರನ್ನು ಕೊಲೆಗೈದು ವಸಂತ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸಂತ್ ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ. ಮೃತ ಮಹಿಳೆ ರೇಖಾ ಕಾಟಿಪಳ್ಳ ನಿವಾಸಿ ಅಶೋಕ್ ಭಂಡಾರಿ ಪತ್ನಿ. ರೇಖಾಳ […]

ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 19, 2020 | 2:26 PM

ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಬಳಿ ಮಹಿಳೆಯೊಬ್ಬಳನ್ನು ಹತ್ಯೆಗೈದು ನಂತರ ಅವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಹಣಕಾಸು ವಹಿವಾಟು ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸುರತ್ಕಲ್ ಬಳಿಯ ಮುಕ್ಕದ ಬಾಡಿಗೆ ಮನೆಯಲ್ಲಿ ಕೃತ್ಯ ‌ನಡೆದಿದೆ. ರೇಖಾ ಭಂಡಾರಿ(36) ಎಂಬುವವರನ್ನು ಕೊಲೆಗೈದು ವಸಂತ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸಂತ್ ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ. ಮೃತ ಮಹಿಳೆ ರೇಖಾ ಕಾಟಿಪಳ್ಳ ನಿವಾಸಿ ಅಶೋಕ್ ಭಂಡಾರಿ ಪತ್ನಿ.

ರೇಖಾಳ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ವಸಂತ್ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ರೇಖಾ ತನ್ನ ಮಗಳನ್ನು ಮನೆಗೆ ಬಿಟ್ಟು ನ.17ರಂದು ವಸಂತ್ ಜೊತೆ ಬಂದಿದ್ದಳು. ಈ ವೇಳೆ ವಸಂತ್​ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ರೇಖಾ ಮತ್ತು ವಸಂತನಿಗೆ ಹತ್ತು ವರ್ಷಗಳಿಂದ ಪರಿಚಯವಿತ್ತು ಎಂದು ಹೇಳಲಾಗಿದೆ. ಬಹಳಷ್ಟು ಸಾಲ ಮಾಡಿಕೊಂಡಿದ್ದ ವಸಂತ್ ರೇಖಾಳಿಂದ ಹಣ ಪಡೆದಿದ್ದನು ಎಂದು ಹೇಳಲಾಗಿದೆ. ಹಾಗಾಗಿ, ಹಣ ವಾಪಸ್ ಕೇಳಿದ ಕಾರಣಕ್ಕೆ ರೇಖಾಳ ಹತ್ಯೆಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್