ಗೃಹ ಕಚೇರಿ ಕೃಷ್ಣಾ ಸಿಬ್ಬಂದಿ ಪತಿಗೆ ಕೊರೊನಾ, ಸಿಎಂ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಪತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೃಷ್ಣಾದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಹೀಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ. ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಗಂಟಲು ದ್ರವ ಸಂಗ್ರಹಿಸಿ ನಿನ್ನೆ ಲ್ಯಾಬ್‌ಗೆ ಕಳಿಸಲಾಗಿತ್ತು. ಇಂದು ಕೊವಿಡ್ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ […]
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಪತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೃಷ್ಣಾದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಹೀಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.
ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಗಂಟಲು ದ್ರವ ಸಂಗ್ರಹಿಸಿ ನಿನ್ನೆ ಲ್ಯಾಬ್‌ಗೆ ಕಳಿಸಲಾಗಿತ್ತು. ಇಂದು ಕೊವಿಡ್ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ. ಹೀಗಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೊರೊನಾ ಆತಂಕ ಸೃಷ್ಟಿಯಾಗಿದೆ.