AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು. ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ. […]

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..
ಆಯೇಷಾ ಬಾನು
ಆಯೇಷಾ ಬಾನು|

Updated on:Nov 22, 2020 | 8:04 AM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು.

ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ.

ತಾಯಿ ರಫಿಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ, ಅಕ್ಕನ ಮಗ ಸೈಯದ್ ವಿರುದ್ಧ ಹಣ ಕಬಳಿಕೆ ಆರೋಪ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ತಾನು ವಿದೇಶಕ್ಕೆ ಹೋಗಿ ಕಷ್ಟಪಟ್ಟು ದುಡಿದ ಹಣ ಪಡೆದು ಕುಟುಂಬಸ್ಥರೇ ಮೋಸ ಮಾಡಿದ್ದಾರೆ. ನಾನು ನನ್ನ ಮಕ್ಕಳಿಗೆ ಭವಿಷ್ಯ ರೂಪಿಸುವುದು ಹೇಗೆ ಎಂದು ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೆಲ್ಫಿ ವಿಡಿಯೋ ಮಾಡಿಟ್ಟು ಫಾತಿಮಾ ವಿಷ ಸೇವಿಸಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 7:08 am, Sun, 22 November 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ