ಆತ್ಮಹತ್ಯೆಗೆ ಶರಣಾದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕನ ಮಡದಿ.. ತಂದೆಗೆ ಕಳುಹಿಸಿದ್ದ ಸಂದೇಶವೇನು ಗೊತ್ತಾ?
ಆತ್ಮಹತ್ಯೆಗೂ ಮುನ್ನ ಪ್ಲೀಸ್ ಟೇಕ್ ಕೇರ್ ಆಫ್ ಮೈ ಡಾಟರ್ ಎಂದು ತಂದೆಗೆ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಆತ್ಮಹತ್ಯೆಗೆ ಶರಣಾದ ಶ್ರುತಿ
ಬೆಳಗಾವಿ:ಜಿಲ್ಲೆಯ ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಪತ್ನಿ, ಮನೆಯ ಬೆಡ್ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.
ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಪತ್ನಿ ಶ್ರುತಿ(29) ಫ್ಯಾನ್‌ಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ‘ಪ್ಲೀಸ್ ಟೇಕ್ ಕೇರ್ ಆಫ್ ಮೈ ಡಾಟರ್’ ಎಂದು ತಂದೆಗೆ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಬಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿ ಆತ್ಮಹತ್ಯೆ: ಮಡದಿಯೊಂದಿಗೆ ವಾಗ್ವಾದದ ಬಳಿಕ ದುರ್ಘಟನೆ