AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವ ಬೇಕು ಅಂದರೆ 4 ಲಕ್ಷ ಬಿಲ್ ಕಟ್ಟಬೇಕಂತೆ, ತಾಯಿ ಶವ ಪಡೆಯಲು ಮಗನ ಕಣ್ಣೀರು.

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಖಾಸಗಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಮುಂದುವರೆದಿದ್ದು, ಮೃತ ತಾಯಿಯ ಶವ ಪಡೆಯಲು ಆಸ್ಪತ್ರೆ ಮುಂದೆ ಮಗ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ತಿಂಗಳು ಅಂದ್ರೆ ಜುಲೈ 22ನೇ ತಾರೀಕಿನಂದು ಮಹಿಳೆಯೊಬ್ಬರು ಗ್ಯಾಸ್ಟ್ರಿಕ್ ಮತ್ತು ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯ ಮಗ ನಾಲ್ಕೈದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಹೀಗಾಗಿ ಆಸ್ಪತ್ರೆಯಲ್ಲಿ ಬೆಡ್ ಬೇಕು ಅಂದರೆ 20 ಸಾವಿರ ರುಪಾಯಿ ಹಣ ಕೊಡಬೇಕು ಅಂತ […]

ಶವ ಬೇಕು ಅಂದರೆ 4 ಲಕ್ಷ ಬಿಲ್ ಕಟ್ಟಬೇಕಂತೆ, ತಾಯಿ ಶವ ಪಡೆಯಲು ಮಗನ ಕಣ್ಣೀರು.
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 02, 2020 | 1:21 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಖಾಸಗಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಮುಂದುವರೆದಿದ್ದು, ಮೃತ ತಾಯಿಯ ಶವ ಪಡೆಯಲು ಆಸ್ಪತ್ರೆ ಮುಂದೆ ಮಗ ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಳೆದ ತಿಂಗಳು ಅಂದ್ರೆ ಜುಲೈ 22ನೇ ತಾರೀಕಿನಂದು ಮಹಿಳೆಯೊಬ್ಬರು ಗ್ಯಾಸ್ಟ್ರಿಕ್ ಮತ್ತು ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯ ಮಗ ನಾಲ್ಕೈದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಹೀಗಾಗಿ ಆಸ್ಪತ್ರೆಯಲ್ಲಿ ಬೆಡ್ ಬೇಕು ಅಂದರೆ 20 ಸಾವಿರ ರುಪಾಯಿ ಹಣ ಕೊಡಬೇಕು ಅಂತ ಬ್ರೋಕರ್​ರೊಬ್ಬ ಹಣವನ್ನು ಪಡೆದುಕೊಂಡಿದ್ದಾನೆ. ಕೊನೆಗೆ ಕೋಣನಕುಂಟೆಯ ಕ್ಯೂರ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿದ್ದಾರೆ.

27 ನೇ ತಾರೀಖಿನಂದು ಖಾಸಗಿ ಲ್ಯಾಬ್ ನಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದೇವೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಆದರೆ ಲ್ಯಾಬ್ ಎಲ್ಲಿದೆ ಎಂದು ಮಹಿಳೆಯ ಮಗ ಹುಡುಕಿಕೊಂಡು ಹೋಗಿದ್ದಾರೆ. ಅಲ್ಲಿ ಆ ಹೆಸರಿನ ಯಾವುದೇ ಲ್ಯಾಬ್ ಇರದಿದ್ದನ್ನು ಕಂಡ ಮಗ ಬಿಬಿಎಂಪಿ ಆಫೀಸಿಗೆ ಹೋಗಿ ಇದರ ಬಗ್ಗೆ ವಿಚಾರಣೆ ಮಾಡಿದ್ದಾರೆ. ಆದರೆ ಬಿಬಿಎಂಪಿ ಸಿಬ್ಬಂದಿಗಳು ನಿಮ್ಮ ತಾಯಿ ಯಾವುದೇ ರಿಪೋರ್ಟ್ ಬಂದಿಲ್ಲವೆಂದು ವಾಪಸ್ ಕಳಿಸಿದ್ದಾರೆ.

ಈಗ 29 ನೇ ತಾರೀಖಿನಂದು ಬೊಮ್ಮನಹಳ್ಳಿಯ ಬಿಬಿಎಂಪಿ ಆಫೀಸಿಗೆ ಹೋಗಿ ರಿಪೋರ್ಟ್ ಚೆಕ್ ಮಾಡಿಸಿದಾಗ ಮಹಿಳೆಗೆ ಕೊರೊನಾ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಆದರೆ ಇಂದು ಬೆಳಿಗ್ಗೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಸಿಬ್ಬಂದಿಗಳು ಉಳಿದ ಬಿಲ್ ಪಾವತಿ ಮಾಡದಿದ್ದರೆ ಮಹಿಳೆಯ ಶವವನ್ನು ಕೊಡುವುದಿಲ್ಲವೆಂದಿದ್ದಾರೆ.

ಈಗಾಗಲೇ 3 ಲಕ್ಷ ಹಣವನ್ನು ಪಾವತಿಸಿರುವ ಮಹಿಳೆಯ ಮಗ, ಉಳಿದ ಹಣವನ್ನು ಕಟ್ಟಲಾಗದೆ ಆಸ್ಪತ್ರೆ ಮುಂದೆ ಕಣ್ಣೀರಿಟ್ಟ ದೃಶ್ಯ ಅಲ್ಲಿದ್ದವರ ಮನಕಲಕುವಂತಿತ್ತು.

Published On - 1:09 pm, Sun, 2 August 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು