ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದುರ್ಮರಣ; ಹತ್ತಿ ಗೋದಾಮಿನಲ್ಲಿ ಕೆಲಸ ಮಾಡುವಾಗ ದುರ್ಘಟನೆ
ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ಶಾಗೋಟಿ ಗ್ರಾಮದ ಸುಜಾತಾ ಸಾವನ್ನಪ್ಪಿದ್ದು, ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲಿ ಟ್ರ್ಯಾಕ್ಟರ್ ಅಪಘಾತ
ಧಾರವಾಡ: ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಅಣ್ಣಿಗೇರಿಯಲ್ಲಿರುವ ಹತ್ತಿ ಗೋದಾಮಿನಲ್ಲಿ ಸಂಭವಿಸಿದೆ. ಸಹಕಾರಿ ಸಂಘದ ಹತ್ತಿ ಗೋದಾಮಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸುಜಾತಾ ಕಿರಬಣ್ಣನವರ (47) ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಾಗೋಟಿ ಗ್ರಾಮದ ಸುಜಾತಾ ಸಾವನ್ನಪ್ಪಿದ್ದು, ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೆರೆಗೆ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಇಬ್ಬರಿಗೆ ಗಾಯ
Published On - 5:51 pm, Sun, 10 January 21




