ತಲೆಯ ಮೇಲೆ ಕಲ್ಲು ಹೊತ್ತು ಮಹಿಳಾ ಹೋರಾಟಗಾರರ ಧರಣಿ!
ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಹಿಳೆಯರು ರಸ್ತೆ ಮಧ್ಯೆ, ಸುಡು ಬಿಸಿಲಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸುತ್ತಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಹೋರಾಟಗಾರರು ತಲೆಯ ಮೇಲೆ ಕಲ್ಲು ಹೊತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಹಾಗೂ ಕೆಲ ಸಂಘಟನೆಗಳು ಒಟ್ಟು ಸೇರಿ ರಸ್ತೆ […]
ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಹಿಳೆಯರು ರಸ್ತೆ ಮಧ್ಯೆ, ಸುಡು ಬಿಸಿಲಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸುತ್ತಿದ್ದಾರೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಹೋರಾಟಗಾರರು ತಲೆಯ ಮೇಲೆ ಕಲ್ಲು ಹೊತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಹಾಗೂ ಕೆಲ ಸಂಘಟನೆಗಳು ಒಟ್ಟು ಸೇರಿ ರಸ್ತೆ ಮಧ್ಯೆ ವೃತ್ತಾಕಾರದಲ್ಲಿ ಕೂತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.