AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!

ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. […]

ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 24, 2020 | 12:39 PM

Share

ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು.

ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ.

ವಾರದ ಹಿಂದೆ ಹೇಮಾವತಿ ನದಿ ನೀರು ಉಕ್ಕಿ ಹರಿದಿದ್ದರಿಂದ ಗದ್ದೆಗಳು ಜಲಾವೃತಗೊಂಡಿದ್ದವು. ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿರುವುದರಿಂದ ನದಿ ನೀರಿನ ಪ್ರಮಾಣವು ಇಳಿಕೆಯಾಗಿದೆ. ನದಿ ನೀರಿನ ಮಟ್ಟ ತಗ್ಗಿದ್ದರಿಂದ ಮಹಿಳೆಯರು ಹೇಮಾವತಿ ನದಿಗೆ ಇಳಿದು ಗೌರಿಯನ್ನು ಕಳುಹಿಸಿಕೊಟ್ಟರು. ಒಂದು ವಾರದ ಹಿಂದೆಯಷ್ಟೇ ಪ್ರವಾಹದ ಭೀತಿ ಹುಟ್ಟಿಸಿದ ಹೇಮೆಯಲ್ಲಿ ಗೌರಿ ಪಯಣಿಸೊದನ್ನ ಕಂಡು ಮಹಿಳೆಯರು ಖುಷಿಪಟ್ಟರು.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ