ರಾಜ್ಯದ ಎಲ್ಲಾ ಶಾಲಾ ಶಿಕ್ಷಕ, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

  • TV9 Web Team
  • Published On - 18:33 PM, 16 Jul 2020
ರಾಜ್ಯದ ಎಲ್ಲಾ ಶಾಲಾ ಶಿಕ್ಷಕ, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮಿತಿ ಮೀರುತ್ತಿದೆ. ಇದು ಕಡಿಮೆಯಾಗುವ ಸೂಚನೆಯೇ ಸಿಗುತ್ತಿಲ್ಲ. ಹೀಗಾಗಿ ಜುಲೈ 31ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ರಾಜ್ಯದ ಎಲ್ಲಾ ಶಾಲೆಗಳ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಸಂಶೋಧಕರು, ಗುತ್ತಿಗೆ ಶಿಕ್ಷಕರು, ಗೌರವ ಶಿಕ್ಷಕರು ಸೇರಿ ಎಲ್ಲಾ‌‌ ಸಿಬ್ಬಂದಿ ವರ್ಗ ಜುಲೈ 31ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಆದರೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಮೌಲ್ಯ ಮಾಪನ ಮತ್ತು ಕೊವಿಡ್ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಇವರನ್ನು ಹೊರತುಪಡಿಸಿ ಉಳಿದವರಿಗೆ ತಿಂಗಳಾಂತ್ಯದವರೆಗೆ ವರ್ಕ್ ಫ್ರಮ್‌ ಹೋಂ ಇರುತ್ತದೆ.