World Day to Combat Desertification and Drought 2024: ಬರಡಾಗುತ್ತಿದೆ ಭೂಮಿಯ ಒಡಲು, ಜಾಗೃತಿ ಅತ್ಯಗತ್ಯ

ಬರಗಾಲ ಹಾಗೂ ಭೂಮಿಯ ಸವಕಳಿಯನ್ನು ತಡೆಗಟ್ಟಲು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಪ್ರತಿ ವರ್ಷ ಜೂನ್ 17 ರಂದು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Day to Combat Desertification and Drought 2024: ಬರಡಾಗುತ್ತಿದೆ ಭೂಮಿಯ ಒಡಲು, ಜಾಗೃತಿ ಅತ್ಯಗತ್ಯ
ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 17, 2024 | 12:11 PM

ಮಾನವನ ಅತಿಯಾದ ಚಟುವಟಿಕೆಯೂ ಪ್ರಕೃತಿ ಹಾಗೂ ಭೂಮಿಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಕಾಡು ನಾಶ, ಹವಾಮಾನ ವೈಪರೀತ್ಯವು ತಂದೊಡ್ಡುತ್ತಿರುವ ಸಮಸ್ಯೆಗಳು ಒಂದೆರಡಲ್ಲ. ಇಷ್ಟಾದರೂ ಬುದ್ದಿವಂತನೆನಿಸಿಕೊಂಡ ಮಾನವ ಪ್ರಾಣಿ ಬುದ್ಧಿಯನ್ನು ಕಲಿತಂತೆ ಕಾಣುತ್ತಿಲ್ಲ. ಕಡಿಮೆ ಮಳೆಯಿಂದ ಬರ ಹಾಗೂ ಮರುಭೂಮೀಕರಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದ್ದು, ಹೀಗೆ ಆದರೆ ಮನುಷ್ಯನಿಗೆ ಬದುಕಲು ನೆಲೆಯಿಲ್ಲದ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯ ಪಡಬೇಕಾಗಿಲ್ಲ. ಫಲವತ್ತಾದ ಭೂಮಿ ನಷ್ಟವಾಗುತ್ತಾ ಹೋದರೆ ಅದರಿಂದಾಗುವ ಭೀಕರ ಪರಿಣಾಮವನ್ನು ಊಹಿಸಲು ಅಸಾಧ್ಯ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನದ ಇತಿಹಾಸ

ವಿಶ್ವದಲ್ಲಿ ಹಲವೆಡೆ ಗಂಭೀರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಜನರಿಗೆ ಭೂಮಿಯ ಫಲವತ್ತತೆಯನ್ನು ಕಾಯ್ದುಕೊಳ್ಳುವ ಬಗ್ಗೆ ಅರಿವು ಮೂಡಿಸುವುದೇ ಈ ದಿನದ ಉದ್ದೇಶದಿಂದ 1994 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ದಿನವನ್ನು ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ಅಂದಿನಿಂದ ಪ್ರತಿವರ್ಷ ಜೂನ್ 17 ರಂದು ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನಾಚರಣೆ ಆಚರಿಸುತ್ತ ಬರಲಾಗುತ್ತಿದೆ.

ಇದನ್ನೂ ಓದಿ: ತ್ಯಾಗ ಬಲಿದಾನದ ಪ್ರತೀಕವೇ ಈ ‘ಬಕ್ರೀದ್ ‘ ಏನಿದರ ವಿಶೇಷತೆ?

ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನದ ಮಹತ್ವ ಹಾಗೂ ಆಚರಣೆ

ಮಾನವನ ಅಪರಿಮಿತ ಚಟುವಟಿಕೆಗಳಿಂದ ಭೂಮಿಯೇ ನಾಶವಾಗುತ್ತಿದೆ. ಈ ಫಲವತ್ತಾದ ಮಣ್ಣು ಹಾಗೂ ಭೂಮಿಯ ಸವಕಳಿಯನ್ನು ತಡೆಗಟ್ಟಲು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ದಿನವು ಮಹತ್ವಪೂರ್ಣದ್ದಾಗಿದೆ. ಅರಣ್ಯನಾಶ ಮತ್ತು ಬರಗಾಲ ತಡೆಗೆ ಕೈ ಜೋಡಿಸದೆ ಹೋದರೆ ಮುಂದಿನ ಪೀಳಿಗೆಗೆ ಜೀವಿಸಲು ಸಾಧ್ಯವಾಗದ ಪರಿಸರವನ್ನು ನಾವು ನಿರ್ಮಾಣ ಮಾಡಿಕೊಟ್ಟಂತೆ ಆಗುತ್ತದೆ. ಈ ದಿನದಂದು ಈ ಬಗ್ಗೆ ಅರಿವು ಮೂಡಿಸಲು ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳು ಸೆಮಿನಾರ್, ಅಭಿಯಾನ, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:13 am, Mon, 17 June 24

ತಾಜಾ ಸುದ್ದಿ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!